ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; SIR ಜಾರಿಯಿಂದ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ ಎಂದರು.
Yathindra Siddaramaiah
ಯತೀಂದ್ರ ಸಿದ್ದರಾಮಯ್ಯ
Updated on

ಸಿಂಧನೂರು: ಪಕ್ಷದ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಹಮತ ವ್ಯಕ್ತಪಡಿಸಿದ್ದು , ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಆಡಳಿತ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮಧ್ಯೆ 6 ವಿಧಾನಸಭಾ ಉಪಚುನಾವಣೆ ನಡೆದಿದ್ದು , ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರಕ್ಕೆ ಜನರ ಸಂಪೂರ್ಣ ಬೆಂಬಲವಿದೆ ಎಂಬುದು ಸಾಬೀತಾಗಿದೆ ಎಂದರು.

Yathindra Siddaramaiah
ನಾಯಕತ್ವ ಬದಲಾವಣೆ ಅನಿಶ್ಚಿತತೆ: ಮೇ ಅಂತ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆ

ಎಸ್ಐಆರ್ ಜಾರಿಯಿಂದ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಆದಂತೆ ಕರ್ನಾಟಕದಲ್ಲಿ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಯಾವುದೇ ಕಾರಣಕ್ಕೂ ಸಾಮಾನ್ಯ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com