NDA ಮೈತ್ರಿ ಬಲಪಡಿಸಿ ಕರ್ನಾಟಕದಲ್ಲಿ ಮುಂದಿನ ಸಲ ಅಧಿಕಾರಕ್ಕೆ ಬರಲು ಜೆಡಿಎಸ್ ಬಿಜೆಪಿಯೊಂದಿಗೆ ಕೆಲಸ ಮಾಡಲಿದೆ: H D ಕುಮಾರಸ್ವಾಮಿ-Video

ನಾವು ಬಿಜೆಪಿಯವರ ಜೊತೆ ಕೈಜೋಡಿಸಿ ಪರಸ್ಪರ ಸಹಮತದಿಂದ ಕರ್ನಾಟಕದಲ್ಲಿ ಮುಂದಿನ ಬಾರಿ 2028ರಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತೇವೆ ಎಂದರು.
H D Kumaraswamy
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ನಮ್ಮ ಮೈತ್ರಿಪಕ್ಷ ಬಿಜೆಪಿಯ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರು ಬೆಂಗಳೂರಿಗೆ ಬಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಕೋರ್ ಕಮಿಟಿ ಸಭೆ ಕೂಡ ನಡೆಸಿದ್ದಾರೆ. ನಾವು ಬಿಜೆಪಿಯವರ ಜೊತೆ ಕೈಜೋಡಿಸಿ ಪರಸ್ಪರ ಸಹಮತದಿಂದ ಕರ್ನಾಟಕದಲ್ಲಿ ಮುಂದಿನ ಬಾರಿ 2028ರಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತೇವೆ ಎಂದರು.

ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ಕರ್ನಾಟಕದಲ್ಲಿ ನಮ್ಮ ಮತ್ತು ಬಿಜೆಪಿ ಪಕ್ಷವನ್ನು ಬಲಪಡಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com