

ಬೆಂಗಳೂರು: ಸಿಎಂ ಪಟ್ಟದಿಂದ ನಿರ್ಗಮಿಸಿದ, ಈ ರಾಜ್ಯ ಕಂಡ ಅತಿ ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರಶಂಸೆಯ ನುಡಿಗಳನ್ನು ಭಾವೀ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ. ಭಾರತ ರಾಜಕಾರಣದ ಧೀಮಂತ ನಾಯಕ ಎಂದು ಹೊಗಳಿದ್ದಾರೆ.
ಡಿ ಕೆ ಶಿವಕುಮಾರ್ ಅವರು ಭಾನುವಾರ ಅಥವಾ ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಸಂಪುಟದಲ್ಲಿ ಯಾವ ನಾಯಕರಿಗೆ ಯಾವ ಖಾತೆಗಳು ಹಂಚಿಕೆಯಾಗಲಿವೆ ಎಂಬ ಕುತೂಹಲವಿದೆ.
ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Advertisement