

ನಿನ್ನೆ ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ.ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಮುಂದಿನ ವ್ಯವಸ್ಥೆಯವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ.
ಕರ್ನಾಟಕ ರಾಜಕೀಯ ನಾಟಕೀಯ ತಿರುವು ಪಡೆದುಕೊಂಡಿದ್ದು, ಸೂಕ್ಷ್ಮವಾಗಿ ನಿರ್ವಹಿಸಲಾದ ಅಧಿಕಾರ ವರ್ಗಾವಣೆಯ ಭಾಗವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಗುರುವಾರ ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಘೋಷಿಸಿ, ಬಳಿಕ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ ಅವರ ಎರಡನೇ ಅವಧಿಯ ಸಿಎಂ ಆಡಳಿತಕ್ಕೆ ತೆರೆ ಬಿದ್ದಿದೆ.
Advertisement