ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಇಂದು ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಭಾವುಕ‌ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ ಎಂದು ಭಾವುಕರಾದರು.
Congress won't let Siddaramaiah rest, his services still needed, says K C Venugopal
ಕೆಸಿ ವೇಣುಗೋಪಾಲ್
Updated on

ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಹ ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು.

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಇಂದು ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಭಾವುಕ‌ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ ಎಂದು ಭಾವುಕರಾದರು.

ಸಿದ್ದರಾಮಯ್ಯನವರೇ ನಾವು ನಿಮಗೆ ವಿಶ್ರಾಂತಿ ನೀಡೋದಿಲ್ಲ. ನಿಮ್ಮ ಸೇವೆ ಇನ್ನೂ ಕರ್ನಾಟಕದ ಜೊತೆಗೆ ರಾಷ್ಟ್ರೀಯ ಮಟ್ಟದಲ್ಲೂ ಅಗತ್ಯ ಇದೆ ಎಂದು ವೇಣುಗೋಪಾಲ್ ಹೇಳಿದರು.

ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಸಿದ್ದರಾಮಯ್ಯನವರು ಸುಗಮಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ವೇಣುಗೋಪಾಲ್, ಬಿಜೆಪಿಯು ಈ ಪ್ರಕ್ರಿಯೆ ಸುಲಭವಲ್ಲ ಎಂದು ಭಾವಿಸಿತ್ತು. ಆದರೆ ಕಾಂಗ್ರೆಸ್‌ನ ಒಗ್ಗಟ್ಟಿನಿಂದ ಬಿಜೆಪಿಯ ನಿರೀಕ್ಷೆಗೆ ತಣ್ಣೀರು ಎರಚಲಾಯಿತು ಎಂದರು.

Congress won't let Siddaramaiah rest, his services still needed, says K C Venugopal
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ ಶಿವಕುಮಾರ್ ಆಯ್ಕೆ; ಶೀಘ್ರದಲ್ಲೇ ರಾಜ್ಯಪಾಲರ ಭೇಟಿ

ಕಾಂಗ್ರೆಸ್ ಬಗ್ಗೆ ಸಿದ್ದರಾಮಯ್ಯ ಅವರ ಬದ್ಧತೆಯು ಪಕ್ಷದ ಕಾರ್ಯಕರ್ತರ ಮನಗೆದ್ದಿದೆ ಮತ್ತು ಸುಗಮ ಅಧಿಕಾರ ಹಸ್ತಾಂತರ ಖಚಿತಪಡಿಸಿಕೊಳ್ಳಲು ಸಹಾಯ ಮಾಡಿದೆ ಎಂದು ವೇಣುಗೋಪಾಲ್ ಹೇಳಿದರು.

ಪಕ್ಷವು ಸಿದ್ದರಾಮಯ್ಯ ಅವರ ಅನುಭವ ಮತ್ತು ಮಾರ್ಗದರ್ಶನ ಪಡೆಯುವುದನ್ನು ಮುಂದುವರಿಸುತ್ತದೆ. 2028ಕ್ಕೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಸಿವಿ ವಿಶ್ವಾಸ ವ್ಯಕ್ತಪಡಿಸಿದರು.

ಕನಸು ನನಸು ಮಾಡಿಕೊಂಡ ಡಿಕೆಶಿ

"ಡಿಕೆ ಶಿವಕುಮಾರ್ ಅವರು ಯುವ ಕಾಂಗ್ರೆಸ್ ನಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದು, ಅಂತಿಮವಾಗಿ, ಅವರು ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಮೇಲಿನ ಅವರ ಪ್ರೀತಿ ಮತ್ತು ನಿಷ್ಠೆಗೆ ಯಾವುದೇ ಸಾಟಿಯಿಲ್ಲ. ಅವರ 24x7 ಕಠಿಣ ಪರಿಶ್ರಮವು ಅಂತಿಮವಾಗಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ" ಎಂದು ವೇಣುಗೋಪಾಲ್ ಹೇಳಿದರು.

ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಸಿ ವೇಣುಗೋಪಾಲ್ ಅವರು, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಹೆಸರನ್ನು ಸಿಎಲ್ ಪಿ ನಾಯಕನ ಹುದ್ದೆಗೆ ಪ್ರಸ್ತಾಪಿಸಿದರು. ಡಾ. ಜಿ ಪರಮೇಶ್ವರ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು. ಹಾಜರಿದ್ದ ಶಾಸಕರು ಅದಕ್ಕೆ ಒಪ್ಪಿಗೆ ಸೂಚಿಸಿದರು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com