ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ-Video

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಸಭೆ ನಿಗದಿಯಾಗಿದ್ದು, ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸುತ್ತಿದ್ದಾರೆ.
Interim CM Siddaramaiah, D K Shivakumar and Rahul Gandhi
ಹಂಗಾಮಿ ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
Updated on

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಇಂದು ಶನಿವಾರ ಸಂಜೆ 4 ಗಂಟೆಗೆ ನಡೆಯಲಿದ್ದು, ರಾಜ್ಯ ರಾಜಕಾರಣದ ಗಮನ ಅದರ ಮೇಲೆ ನೆಟ್ಟಿದೆ.

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಸಭೆ ನಿಗದಿಯಾಗಿದ್ದು, ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಎಲ್ಲಾ ಹಿರಿಯ ನಾಯಕರು ಮತ್ತು ಶಾಸಕರು ಭಾಗವಹಿಸಲಿದ್ದಾರೆ.

ದೆಹಲಿಗೆ ತೆರಳಿದ್ದ ಹಂಗಾಮಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಿದ್ದಾರೆ.

ಹೊಸ ಮುಖ್ಯಮಂತ್ರಿಯ ಹೆಸರನ್ನು ಸಭೆಯಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು. ಇಂದು ಸಭೆಯಲ್ಲೇ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ್ನು ನಿನ್ನೆ ಭೇಟಿ ಮಾಡಿದ್ದು, ಇಂದು ಈ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.

ಡಿ ಕೆ ಶಿವಕುಮಾರ್ ಜೊತೆ ಸಚಿವ ಸಂಪುಟದ ಸಂಪೂರ್ಣ ಸಚಿವರ ಪ್ರಮಾಣವಚನ?

ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಅವರನ್ನು ಹೊಸ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ . ಅಥವಾ ಮುಂದಿನ ಸಿಎಲ್ಪಿ ನಾಯಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ನೀಡುವ ಏಕಪಂಕ್ತಿ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸುವ ಸಾಧ್ಯತೆಯೂ ಇದೆ.

Interim CM Siddaramaiah, D K Shivakumar and Rahul Gandhi
Karnataka CM News LIVE Updates | ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಹಿರಿಯ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ್ ಅವರ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ನಾಳೆ ಅಥವಾ ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ದೆಹಲಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಚರ್ಚೆಯ ಪ್ರಕಾರ, ರಾಹುಲ್ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟವೇ ಪ್ರಮಾಣವಚನ ಸ್ವೀಕರಿಸಬೇಕು ಎಂದು ಬಯಸಿದ್ದಾರೆ ಎನ್ನಲಾಗಿದೆ. ಆದರೆ ಮೊದಲ ಹಂತದಲ್ಲಿ 8ರಿಂದ 10 ಮಂದಿ ಸಚಿವರು ಮಾತ್ರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯೂ ಇದೆ.

ಇದಲ್ಲದೆ, ಸಚಿವ ಸ್ಥಾನಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹೆಚ್ಚಿನ ಪಾತ್ರವಹಿಸಲು ಬಯಸುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಡಿ ಕೆ ಶಿವಕುಮಾರ್ ಬೆಂಗಳೂರಿಗೆ ಆಗಮನ, ನೂತನ ಸಚಿವರ ಪಟ್ಟಿ ಸಿದ್ಧ?

ಕಳೆದ ರಾತ್ರಿ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದು ನೂತನ ಸಚಿವರ ಪಟ್ಟಿ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಗೆ ತೆರಳುವಾಗ ವಿಮಾನದಲ್ಲೇ ಸಂಭಾವ್ಯ ಸಚಿವರ ಪಟ್ಟಿಯನ್ನು ಹಿಡಿದು ಪರಿಶೀಲನೆ ನಡೆಸಿದ್ದ ಡಿಕೆಶಿ, ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com