ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿಸಿದ್ದು ಕುಮಾರಸ್ವಾಮಿಯೇ! ಡಿಕೆಶಿ ಸಿಎಂ ಆಗಿರೋದನ್ನ ಸಹಿಸಲಾಗದೆ ಹೆಚ್‌ಡಿಕೆ ಪಿತೂರಿ ಎಂದು ಸಚಿವ ಪುಟ್ಟರಂಗಶೆಟ್ಟಿ ಗಂಭೀರ ಆರೋಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಅನ್ನು ನೂರಕ್ಕೆ ನೂರು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರೇ ಮಾಡಿಸಿದ್ದಾರೆ" ಎಂದು ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Union Minister HD Kumaraswamy Behind Siddaramaiah Sting Operation, Alleges Karnataka Minister C Puttarangashetty
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿಸಿದ್ದು ಕುಮಾರಸ್ವಾಮಿಯೇ ಎಂದ ಸಚಿವ ಪುಟ್ಟರಂಗಶೆಟ್ಟಿOnline Desk
Updated on: 

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಇದರ ನಡುವೆಯೇ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು, "ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಅನ್ನು ನೂರಕ್ಕೆ ನೂರು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರೇ ಮಾಡಿಸಿದ್ದಾರೆ" ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು, "ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಅನ್ನು ನೂರಕ್ಕೆ ನೂರು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರೇ ಮಾಡಿಸಿದ್ದಾರೆ. ಮೊದಲಿನಿಂದಲೂ ಇಂತಹ ಕೆಲಸಗಳನ್ನು ಕುಮಾರಸ್ವಾಮಿ ಮಾತ್ರ ಮಾಡುತ್ತಾ ಬಂದಿದ್ದಾರೆ, ಬೇರೆ ಯಾರೂ ಮಾಡಿಲ್ಲ. ಕುಮಾರಸ್ವಾಮಿ ಅವರಿಗೆ ಮೊದಲಿನಿಂದಲೂ ಇದೇ ಕೆಲಸವಾಗಿದ್ದು, ತಮ್ಮ ಬಳಿ ಪೆನ್‌ಡ್ರೈವ್ ಇದೆ ಎಂದು ಅವರೇ ಹೇಳಿಕೊಳ್ಳುತ್ತಿದ್ದರು. ಅದರಲ್ಲೂ, ಡಿ. ಕೆ. ಶಿವಕುಮಾರ್ ಅವರು ಸಿಎಂ ಆಗಿರುವುದನ್ನು ಸಹಿಸಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿಯೇ ಈ ಪಿತೂರಿ ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.

ಕೃಪಾ ಆಳ್ವಾ ಅವರು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರಿಂದ ಅಮಾನತು!

ಮುಂದುವರೆದು, ಕೃಪಾ ಆಳ್ವಾ ಉಚ್ಚಾಟನೆ ಬಗ್ಗೆ ಮಾತನಾಡಿದ ಪುಟ್ಟರಂಗಶೆಟ್ಟಿ, ಕೃಪಾ ಆಳ್ವಾ ಅವರು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರಿಂದ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಆದರೆ ಸ್ಟಿಂಗ್ ಕಾರ್ಯಾಚರಣೆಯಲ್ಲಿ ಅವರ ಪಾತ್ರವಿದೆಯೇ ಎಂಬ ಬಗ್ಗೆ ತಮಗೆ ನಿಖರ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಚಿವರು, "ಹಾಲಿನ ದರ ಏರಿಕೆಯಲ್ಲಿ 7 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ ಮತ್ತು 1 ರೂಪಾಯಿ ಮಾತ್ರ ಒಕ್ಕೂಟ ಅಥವಾ ಫೆಡರೇಶನ್‌ಗೆ ಹೋಗುತ್ತದೆ. ಅದರಲ್ಲೂ, ಯುದ್ಧಗಳು ಮತ್ತು ಜಾಗತಿಕ ಪರಿಸ್ಥಿತಿಯಿಂದಾಗಿ ಪೆಟ್ರೋಲ್, ಡೀಸೆಲ್ ಹಾಗೂ ಇಂಪೋರ್ಟೆಡ್ ವಸ್ತುಗಳ ಬೆಲೆ ಏರಿಕೆಯಾಗಿ ಒಕ್ಕೂಟಕ್ಕೆ ನಷ್ಟವಾಗುತ್ತಿದ್ದು, ಅದಕ್ಕಾಗಿ 1 ರೂಪಾಯಿ ನೀಡಲಾಗಿದೆ. ಜೊತೆಗೆ, ಬಹುಪಾಲು ರೈತರು ಮತ್ತು ಹಾಲು ಉತ್ಪಾದಕರಿಗೆ ಇದರಿಂದ ದೊಡ್ಡ ಮಟ್ಟದ ಅನುಕೂಲವಾಗಲಿದ್ದು, ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಸಮಂಜಸವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Union Minister HD Kumaraswamy Behind Siddaramaiah Sting Operation, Alleges Karnataka Minister C Puttarangashetty
ಸ್ಟಿಂಗ್ ಆಪರೇಷನ್: ಕಾಂಗ್ರೆಸ್ ಮೊದಲ ವಿಕೆಟ್ ಪತನ, ಕೃಪಾ ಆಳ್ವಾ ಪಕ್ಷದಿಂದ ಉಚ್ಛಾಟನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X