ಹಾಲಿನ ಬೆಲೆ ಏರಿಕೆ ಹಿಂಪಡೆಯಿರಿ, ಇಲ್ಲವೇ ಅಧಿಕಾರದಿಂದ ಕೆಳಗಿಳಿಯಿರಿ: ಡಿಕೆ.ಶಿವಕುಮಾರ್ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

ಕಳೆದ 3-4 ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹೋಟೆಲ್ ಕಾರ್ಮಿಕರು, ಟ್ಯಾಕ್ಸಿ ಮತ್ತು ಆಟೊ ಚಾಲಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಅಲ್ಪ ಆದಾಯದಲ್ಲಿ ಮನೆ ಬಾಡಿಗೆ, ವಿದ್ಯುತ್, ನೀರು ಮತ್ತು ಕಸ ವಿಲೇವಾರಿ ಶುಲ್ಕ ಪಾವತಿಸಬೇಕಾಗಿದೆ.
Union Minister Shobha Karandlaje leads a BJP Mahila Morcha protest against milk and curd price hike at Freedom Park on Monday.
ಹಾಲು ಮತ್ತು ಮೊಸರಿನ ಬೆಲೆ ಏರಿಕೆಯನ್ನು ವಿರೋಧಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು.
Updated on: 

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಮಾಡಿರುವ ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಆಗ್ರಹಿಸಿದ್ದಾರೆ.

ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕ್ರಾಂತಿಯಾಗುವ ಮುನ್ನವೇ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು. ಇಲ್ಲವೇ ಎಲ್ಲ ಬೆಲೆ ಏರಿಕೆಗಳನ್ನು ಹಿಂಪಡೆದು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ 3-4 ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹೋಟೆಲ್ ಕಾರ್ಮಿಕರು, ಟ್ಯಾಕ್ಸಿ ಮತ್ತು ಆಟೊ ಚಾಲಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಅಲ್ಪ ಆದಾಯದಲ್ಲಿ ಮನೆ ಬಾಡಿಗೆ, ವಿದ್ಯುತ್, ನೀರು ಮತ್ತು ಕಸ ವಿಲೇವಾರಿ ಶುಲ್ಕ ಪಾವತಿಸಬೇಕಾಗಿದೆ. ಇದರ ನಡುವೆ ಪ್ರತಿ ವರ್ಷ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬೀಳುತ್ತಿದೆ ಎಂದು ದೂರಿದರು.

ಗೃಹಲಕ್ಷ್ಮಿ ಯೋಜನೆಗೆ ಮೀಸಲಿಟ್ಟಿದ್ದ 5,000 ಕೋಟಿ ರೂ. ಹಣ ಎಲ್ಲಿ ಹೋಯಿತು ಎಂಬುದಕ್ಕೂ ಈವರೆಗೆ ಲೆಕ್ಕ ನೀಡಿಲ್ಲ ಎಂದು ಆರೋಪಿಸಿದರು.

Union Minister Shobha Karandlaje leads a BJP Mahila Morcha protest against milk and curd price hike at Freedom Park on Monday.
'ನಂದಿನಿ ಹಾಲು ದರ 8 ಅಲ್ಲ, ಗರಿಷ್ಠ 12 ರೂ ಏರಿಕೆ'; ರೊಚ್ಚಿಗೆದ್ದ ಗ್ರಾಹಕರು, Video Viral

ಮಾಜಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಸರ್ಕಾರ ಕೂಡಲೇ ಹಾಲಿನ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹಾಲಿನ ಸಬ್ಸಿಡಿ ಹಣವನ್ನು ಖಜಾನೆಯಿಂದ ಭರಿಸಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರವೂ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಅದೇ ಕ್ರಮ ಅನುಸರಿಸಬೇಕು. ಗ್ರಾಹಕರಿಗೆ ಬೆಲೆ ಏರಿಕೆಯ ಆಘಾತ ನೀಡಬಾರದು ಎಂದು ಆಗ್ರಹಿಸಿದರು.

ಸರ್ಕಾರ ಈ ಹಿಂದೆ ಲೀಟರ್ ಹಾಲಿನ ಬೆಲೆಯನ್ನು ನಾಲ್ಕು ಬಾರಿ ಏರಿಕೆ ಮಾಡಿದೆ. ಮೊದಲಿಗೆ 4 ರೂ., ನಂತರ 3 ರೂ., ಆ ಬಳಿಕ 2 ರೂ. ಹೆಚ್ಚಿಸಿದ್ದು, ಇದೀಗ ಮತ್ತೆ 8 ರೂ. ಏರಿಕೆ ಮಾಡಿದೆ ಎಂದು ಭಾರತಿ ಶೆಟ್ಟಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X