Sting operation ವಿವಾದ: ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ; HDK ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಪ್ರಮುಖ ವಿಚಾರಗಳಲ್ಲಿ ಸರ್ಕಾರದ ಹಸ್ತಕ್ಷೇಪದಿಂದಾಗಿ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿದೆ.
Union Minister V.Somanna
ಕೇಂದ್ರ ಸಚಿವ ವಿ. ಸೋಮಣ್ಣ
Updated on: 

ಹಾಸನ: ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗುರಿ ಮಾಡುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದಲ್ಲಿ ಸೋಮವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಮತ್ತು ಕುಮಾರಸ್ವಾಮಿ ಅವರ ಜನಪ್ರಿಯತೆಗೆ ಧಕ್ಕೆ ತರಲು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಪ್ರಮುಖ ವಿಚಾರಗಳಲ್ಲಿ ಸರ್ಕಾರದ ಹಸ್ತಕ್ಷೇಪದಿಂದಾಗಿ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿದೆ ಎಂದು ದೂರಿದರು.

ಇದೇ ವೇಳೆ ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ನಡುವಿನ ವಂದೇ ಭಾರತ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನೈರುತ್ಯ ರೈಲ್ವೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಳಿಸಿದ ಕೂಡಲೇ ರೈಲು ಸಂಚಾರ ಆರಂಭವಾಗಲಿದೆ ಎಂದು ಹೇಳಿದರು.

Union Minister V.Somanna
ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು!

ತಾವು ರೈಲ್ವೆ ಸಚಿವರಾದ ಬಳಿಕ ಕರ್ನಾಟಕದಲ್ಲಿ 52,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದು ತಿಳಿಸಿದರು. ಅಲ್ಲದೆ, 50,000 ಕೋಟಿ ರೂ. ಮೊತ್ತದ ಯೋಜನೆಗಳು ಮತ್ತು ಕಾಮಗಾರಿಗಳ ಪ್ರಸ್ತಾವನೆ ಕೇಂದ್ರದ ಮುಂದಿದ್ದು, ಅವುಗಳಿಗೆ ಶೀಘ್ರ ಅನುಮೋದನೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದೆ ಎಂದು ಹೇಳಿದರು.

ಬಳಿಕ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೇಂದ್ರವು ಯಾವುದೇ ರಾಜ್ಯದ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದರು. ಬರ ಪರಿಸ್ಥಿತಿ ಎದುರಿಸಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ 4,500 ಕೋಟಿ ರೂ.ಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲು ಜನರು ಕಾಯುತ್ತಿದ್ದಾರೆ. ನಾಲ್ಕೂ ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಸೋಲು ಕಂಡಿರುವುದರಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿಗೆ ಮರಳಿ ಸೇರಿಸಿಕೊಳ್ಳುವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X