ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲಾಗದ ನಿಮಗೆ ಮೋದಿ ಬಗ್ಗೆ ಮಾತನಾಡುವ ಹಕ್ಕಿದೆಯೇ?: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಡಿ.ಕೆ. ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ ಅಥವಾ ಯಾವುದೇ ಸಚಿವರಾಗಿರಲಿ, ಮೊದಲು ಈ ದೇಶದ ಪ್ರಧಾನಿಯಾದ ನರೇಂದ್ರ ಮೋದಿ ಅವರಿಗೆ ಗೌರವ ನೀಡಬೇಕು. ಮೋದಿ ಅವರು ಕೇವಲ ಭಾರತೀಯ ಜನತಾ ಪಕ್ಷದ ಪ್ರಧಾನಿಯಲ್ಲ, ಇಡೀ ದೇಶದ ಪ್ರಧಾನಿ.
priyank Kharge, Vijayendra
ಪ್ರಿಯಾಂಕ್ ಖರ್ಗೆ, ವಿಜಯೇಂದ್ರ
Updated on: 

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಪ್ರಧಾನಿ ಮೋದಿ ಅವರನ್ನು ಟೀಕಿಸುವುದೇ ಪ್ರಿಯಾಂಕ್ ಖರ್ಗೆ ಅವರ ಬಹುತೇಕ ಸಮಯದ ಕೆಲಸವಾಗಿದೆ. ಇದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ತಮ್ಮ ಹೆಚ್ಚಿನ ಸಮಯವನ್ನು ಆರ್‌ಎಸ್‌ಎಸ್ ಮೇಲೆ ದಾಳಿ ಮಾಡಲು ಮತ್ತು ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಳ್ಳಲು ಕಳೆಯುತ್ತಾರೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ.

ಯಾವುದೇ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಯಾರಾದರೂ ಮಾತನಾಡುವುದಿದ್ದರೆ ಮಾತನಾಡಲಿ. ಅದಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಆದರೆ, ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಸಂಪೂರ್ಣ ವಿಫಲರಾಗಿರುವ ಪ್ರಿಯಾಂಕ್ ಖರ್ಗೆ ಅವರು ನಮ್ಮ ಪ್ರಧಾನಿಯ ವಿರುದ್ಧ ಈ ರೀತಿ ಅಸಂಬದ್ಧವಾಗಿ ಮಾತನಾಡಲು ಯಾರು ಎಂದು ಪ್ರಶ್ನಿಸಿದ್ದಾರೆ.

ಡಿ.ಕೆ. ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ ಅಥವಾ ಯಾವುದೇ ಸಚಿವರಾಗಿರಲಿ, ಮೊದಲು ಈ ದೇಶದ ಪ್ರಧಾನಿಯಾದ ನರೇಂದ್ರ ಮೋದಿ ಅವರಿಗೆ ಗೌರವ ನೀಡಬೇಕು. ಮೋದಿ ಅವರು ಕೇವಲ ಭಾರತೀಯ ಜನತಾ ಪಕ್ಷದ ಪ್ರಧಾನಿಯಲ್ಲ, ಇಡೀ ದೇಶದ ಪ್ರಧಾನಿಯಾಗಿದ್ದಾರೆ. ಈ ಹುದ್ದೆಯ ಮಹತ್ವವನ್ನು ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೂ ಅರ್ಥಮಾಡಿಕೊಂಡು ಗೌರವಿಸಬೇಕು ಎಂದು ಹೇಳಿದ್ದಾರೆ.

priyank Kharge, Vijayendra
PM Modi visit to Bengaluru | ಕರ್ನಾಟಕದಲ್ಲಿ 15,600 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X