ಮೋದಿ ಪ್ರಧಾನಿಯಾದ ಬಳಿಕ ಕೇಂದ್ರದ ಪ್ರಚಾರದ ಗಿಮಿಕ್ ಜಾಸ್ತಿಯಾಗಿದೆ: ಮೋದಿ ರಾಜ್ಯ ಭೇಟಿಗೆ ಸಚಿವ ಸಂತೋಷ್ ಲಾಡ್ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, "ಯಾವಾಗಲೂ ಕೇಂದ್ರ ಸರ್ಕಾರದ್ದು ಪ್ರಚಾರದ ಗಿಮಿಕ್ ಅಷ್ಟೇ" ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Santhosh Lad Slams Central Government Over Prime Minister Narendra Modi Karnataka Visit
ಮೋದಿ ರಾಜ್ಯ ಭೇಟಿಗೆ ಸಚಿವ ಸಂತೋಷ್ ಲಾಡ್ ವ್ಯಂಗ್ಯOnline Desk
Updated on: 

ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್, ವಂದೇ ಭಾರತ್ ಎಕ್ಸ್‌ಪ್ರೆಸ್, ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ ಸೇರಿದಂತೆ ಹಲವಾರು ಯೋಜನೆಗಳ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯ ಕರ್ನಾಟಕ ಪ್ರವಾಸವನ್ನು ಟೀಕಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನೀಡಿದ "ಯಾವಾಗಲೂ ಕೇಂದ್ರ ಸರ್ಕಾರದ್ದು ಪ್ರಚಾರದ ಗಿಮಿಕ್ ಅಷ್ಟೇ" ಎಂಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಕೇವಲ ಜಾಹೀರಾತುಗಳಿಗಾಗಿ ₹473 ಕೋಟಿ (ದಿನಕ್ಕೆ ₹43 ಲಕ್ಷಕ್ಕೂ ಹೆಚ್ಚು) ಖರ್ಚು ಮಾಡಿದೆ ಎಂದು ಆರೋಪಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕೇಂದ್ರ ಸರ್ಕಾರದ್ದು ಪ್ರಚಾರದ ಗಿಮಿಕ್ ಅಷ್ಟೇ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಲಾಡ್, ಕೇಂದ್ರ ಸರ್ಕಾರವು ಮೊದಲಿನಿಂದಲೂ ಪ್ರಚಾರದ ಗಿಮಿಕ್ ಮಾಡಿಕೊಂಡೇ ಬಂದಿದೆ; ಆದರೆ ಮೋದಿ ಅವರು ಪ್ರಧಾನಿಯಾದ ಬಳಿಕ ಇದನ್ನು ಇನ್ನೂ ದೊಡ್ಡ ಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಟೀಕಿಸಿದರು. ಇದರೊಂದಿಗೆ, ಬೆಂಗಳೂರು ಮೆಟ್ರೋ ಅಭಿವೃದ್ಧಿಗೆ ಕೇಂದ್ರ ಹಣಕಾಸು ಇಲಾಖೆಯಿಂದ ಎಷ್ಟು ಅನುದಾನ ನೀಡಲಾಗಿದೆ ಎಂಬುದರ ಕುರಿತು ಕೇಂದ್ರ ಸರ್ಕಾರ ಶ್ವೇತಪತ್ರ (White Paper) ಹೊರಡಿಸಲಿ ಮತ್ತು ಅಧಿಕೃತ ದಾಖಲೆಗಳನ್ನು ನೀಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಮುಂದುವರೆದು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಲಾಡ್, ಕೇಂದ್ರ ಸರ್ಕಾರ ಮತ್ತು ಗುಜರಾತ್ ರಾಜ್ಯದ ಮೇಲಿರುವ ಸಾಲದ ಪ್ರಮಾಣ ಎಷ್ಟಿದೆ ಎಂಬುದನ್ನು ಮೊದಲು ಪ್ರಶ್ನಿಸಲಿ ಎಂದ ಲಾಡ್, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ದೇಶದ ಮೇಲಿನ ಸಾಲದ ಹೊರೆ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿರುವ ಕುರಿತು ಕೇಂದ್ರ ಸರ್ಕಾರ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಗರಿಷ್ಠ ಮಿತಿ ಶೇ. 20 ಇದ್ದರೂ ಶೇ. 30ರಷ್ಟು ಮಿಶ್ರಣ ಮಾಡಲಾಗುತ್ತಿದೆ ಮತ್ತು ₹55–₹60ಕ್ಕೆ ಖರೀದಿಸಿದ ಎಥೆನಾಲ್ ಅನ್ನು ಗ್ರಾಹಕರಿಗೆ ₹105–₹110ಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Santhosh Lad Slams Central Government Over Prime Minister Narendra Modi Karnataka Visit
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲಾಗದ ನಿಮಗೆ ಮೋದಿ ಬಗ್ಗೆ ಮಾತನಾಡುವ ಹಕ್ಕಿದೆಯೇ?: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ

"ಪ್ರಚಾರದ ಗಿಮಿಕ್" ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತ್ಯಾರೋಪ ಮಾಡಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಕೇವಲ ಜಾಹೀರಾತುಗಳಿಗಾಗಿ ₹473 ಕೋಟಿ (ದಿನಕ್ಕೆ ₹43 ಲಕ್ಷಕ್ಕೂ ಹೆಚ್ಚು) ಖರ್ಚು ಮಾಡಿದೆ ಎಂದು ಟೀಕಿಸಿದ್ದಾರೆ. ಇದರೊಂದಿಗೆ, ಅಭಿವೃದ್ಧಿ ಶೂನ್ಯ, ಪ್ರಚಾರವೇ ಪ್ರಧಾನ. ಹಾಲು, ಬಸ್ ಪ್ರಯಾಣ ದರ ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ, ರಸ್ತೆ ಗುಂಡಿಗಳನ್ನು ಮುಚ್ಚಲು ಮತ್ತು ಗುತ್ತಿಗೆದಾರರ ಬಾಕಿ ಪಾವತಿಸಲು ಹಣವಿಲ್ಲದೆ ಕೇವಲ ಮಾಧ್ಯಮಗಳ ಮೂಲಕ ಸ್ವಯಂ ಪ್ರಚಾರ ಪಡೆಯುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಏತನ್ಮಧ್ಯೆ, ಹಾಲು, ಮೊಸರು ಮತ್ತು ಬಸ್ ದರ ಏರಿಕೆಯ ಕುರಿತ ಬಿಜೆಪಿ ಟೀಕೆಗಳಿಗೆ ಉತ್ತರಿಸಿರುವ ಸಂತೋಷ್ ಲಾಡ್, ಕಳೆದ 7–8 ವರ್ಷಗಳಿಂದ ಹಾಲಿನ ದರ ಏರಿಸಿರಲಿಲ್ಲ ಮತ್ತು ಗುಜರಾತ್ ಹಾಗೂ ಮಹಾರಾಷ್ಟ್ರದಂತಹ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈಗಲೂ ಹಾಲಿನ ದರ ಕಡಿಮೆಯಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X