ಹೊಸ ವರ್ಷದಲ್ಲಿ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಶ್ರೀರಾಮುಲು ಹೊಸ ಬಾಂಬ್

ಇಲ್ಲಿ ನಡೆದ ರೈತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶ್ರೀರಾಮುಲು, ಈ ಸಂಬಂಧ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರಿಂದ ಸಹಿ ಸಂಗ್ರಹಿಸುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಗದಗ ಸಮೀಪ ನಡೆದ ಕಾರ್ಯಕ್ರಮದ ಉದ್ಘಾಟನೆ ವೇಳೆ ಬಿಜೆಪಿ ನಾಯಕ ಬಿ. ಶ್ರೀರಾಮುಲು.
ಗದಗ ಸಮೀಪ ನಡೆದ ಕಾರ್ಯಕ್ರಮದ ಉದ್ಘಾಟನೆ ವೇಳೆ ಬಿಜೆಪಿ ನಾಯಕ ಬಿ. ಶ್ರೀರಾಮುಲು.
Updated on: 

ಗದಗ: ಹೊಸ ವರ್ಷದಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ. ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.

ಇಲ್ಲಿ ನಡೆದ ರೈತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶ್ರೀರಾಮುಲು, ಈ ಸಂಬಂಧ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರಿಂದ ಸಹಿ ಸಂಗ್ರಹಿಸುವ ಸಾಧ್ಯತೆಯಿದೆ ಎಂದು ತಿಳಿಸಿದರು.

ನಾಯಕತ್ವ ಬದಲಾವಣೆ ಅಥವಾ ಮೂರನೇ ಮುಖ್ಯಮಂತ್ರಿಯನ್ನು ನೇಮಿಸುವ ಕುರಿತು ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿ ತಮ್ಮ ಮೂಲಗಳಿಂದ ಲಭಿಸಿದೆ ಎಂದು ಅವರು ಹೇಳಿದರು.

ಗದಗ ಸಮೀಪ ನಡೆದ ಕಾರ್ಯಕ್ರಮದ ಉದ್ಘಾಟನೆ ವೇಳೆ ಬಿಜೆಪಿ ನಾಯಕ ಬಿ. ಶ್ರೀರಾಮುಲು.
'ಹೋಗಯ್ಯ 2028ಕ್ಕೆ HDK ಸಿಎಂ ಆಗ್ತಾರೆ, 1000 ಕೋಟಿ ರೂ ಗ್ರಾಂಟ್ ಕೊಡ್ತಾರೆ': ಡಿಕೆಶಿ ಆಫರ್ ತಿರಸ್ಕರಿಸಿದ್ದಾಗಿ MT ಕೃಷ್ಣಪ್ಪ ಹೇಳಿಕೆ

ರಾಜ್ಯದಲ್ಲಿನ ನಾಯಕತ್ವದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ತೃಪ್ತಿಯಿಲ್ಲ ಎಂದು ಶ್ರೀರಾಮುಲು ಆರೋಪಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಬಳಿಕ ಈ ವಿಚಾರ ಬಹಿರಂಗವಾಗಿದೆ ಎಂದರು.

ಇದಲ್ಲದೆ, ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟು ತಾವು ತಪ್ಪು ಮಾಡಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳೂ ಬಂದಿವೆ ಎಂದು ಅವರು ಹೇಳಿದರು.

ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ ಎಂಬ ಮಾಹಿತಿ ತಿಳಿದ ಬಳಿಕ ಡಿ ಕೆ ಶಿವಕುಮಾರ್ ಅವರು ಶಾಸಕರಿಗೆ ಅನುದಾನ ನೀಡಲು ಆರಂಭಿಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು. ಅಧಿಕಾರದಲ್ಲಿ ಮುಂದುವರಿಯಲು ಆಡಳಿತಾರೂಢ ಕಾಂಗ್ರೆಸ್ ಕೇವಲ ನಾಟಕವಾಡುತ್ತಿದೆ ಎಂದರು.

ಹಲವು ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಿದ ಬಳಿಕ ರಾಜ್ಯ ಸರ್ಕಾರ ರೈತರಿಗೆ 2,500 ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಈವರೆಗೆ ಕೇವಲ 1,500 ರೂ ಮಾತ್ರ ವಿತರಿಸಲಾಗಿದೆ. ಈ ಕುರಿತು ಪ್ರಶ್ನಿಸಿದಾಗ, ಶೀಘ್ರದಲ್ಲೇ 1,000 ರೂ ನೀಡುವುದಾಗಿ ಸರ್ಕಾರ ಹೇಳಿದೆ ಎಂದು ಶ್ರೀರಾಮುಲು ತಿಳಿಸಿದರು.

ಹಾಲಿನ ದರ ಹೆಚ್ಚಳವಾದಾಗ ರೈತರಿಗೆ ಸಬ್ಸಿಡಿ ನೀಡಲು ಅವಕಾಶವಿದೆ. ಆದರೆ, ಸರ್ಕಾರದ ಬಳಿ ಅನುದಾನದ ಕೊರತೆಯಿರುವ ಹಿನ್ನೆಲೆಯಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಳದ ವಿಚಾರವನ್ನು ಮುಂದಿಟ್ಟುಕೊಂಡು ಸಾರ್ವಜನಿಕರ ಗಮನ ಬೇರೆಡೆ ಸೆಳೆಯುತ್ತಿದೆ ಎಂದು ಅವರು ಆರೋಪಿಸಿದರು.

ಗದಗ ಸಮೀಪದ ಹರ್ತಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಆಯೋಜಿಸಿದ್ದ ದಿನವಿಡೀ ನಡೆದ ಪೂಜಾ ಕಾರ್ಯಕ್ರಮದಲ್ಲೂ ಶ್ರೀರಾಮುಲು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X