ಕುಮಾರಸ್ವಾಮಿ ಗೊಡ್ಡು ಹಸುವಿನಂತೆ, ಅವರಿಂದ ಯಾವುದೇ ಪ್ರಯೋಜನವಿಲ್ಲ: ವರ್ಷದ ಬಳಿಕ ಮೌನ ಮುರಿದ ಸಿ.ಪಿ ಯೋಗೇಶ್ವರ್

ಕುಮಾರಸ್ವಾಮಿ ಅವರು ಕೀಳುಮಟ್ಟದ ಟೀಕೆಗಳನ್ನು ನಿಲ್ಲಿಸಬೇಕು. ಸರ್ಕಾರಕ್ಕೆ ಸಹಕಾರ ನೀಡದಿದ್ದರೂ ಪರವಾಗಿಲ್ಲ, ರಾಷ್ಟ್ರ ರಾಜಕಾರಣ ಮಾಡಲಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
C P yogeeshwar
ಸಿ.ಪಿ ಯೋಗೇಶ್ವರ್
Updated on: 

ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ 'ಗೊಡ್ಡು ಹಸುವಿನಂತೆ' ಅವರಿಂದ ಚನ್ನಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ಶಾಸಕ ಸಿಪಿ ಯೋಗೇಶ್ವರ್ ಟೀಕಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೀಳುಮಟ್ಟದ ಟೀಕೆಗಳನ್ನು ನಿಲ್ಲಿಸಬೇಕು. ಸರ್ಕಾರಕ್ಕೆ ಸಹಕಾರ ನೀಡದಿದ್ದರೂ ಪರವಾಗಿಲ್ಲ, ರಾಷ್ಟ್ರ ರಾಜಕಾರಣ ಮಾಡಲಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರನ್ನು ‘ಗೊಡ್ಡು ಹಸುವಿನಂತೆ’ ಚನ್ನಪಟ್ಟಣಕ್ಕೆ ಏನನ್ನೂ ಕೊಡುಗೆಯಾಗಿ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಏಳು ವರ್ಷಗಳ ಕಾಲ ಚನ್ನಪಟ್ಟಣದ ಶಾಸಕರಾಗಿದ್ದರೂ, ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಖಾಸಗಿ ಬಸ್ ನಿಲ್ದಾಣದ ಬಗ್ಗೆ ಗಮನ ಹರಿಸಿಲ್ಲ. ಚನ್ನಪಟ್ಟಣಕ್ಕೆ ಶಾಶ್ವತ ಅಭಿವೃದ್ಧಿಯ ಕೊಡುಗೆ ಏನು ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನಿಟ್ಟುಕೊಂಡು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ತಮ್ಮ ನಡುವೆ ಈ ಹಿಂದೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವು ಎಂಬುದನ್ನೂ ಯೋಗೇಶ್ವರ್ ಒಪ್ಪಿಕೊಂಡಿದ್ದಾರೆ. ಆದರೆ, ಈಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದರಿಂದ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ಮುನಿಸಿಕೊಂಡರೆ ನಷ್ಟ ನಮಗೇ ಹೊರತು ಬೇರೆಯವರಿಗಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

C P yogeeshwar
ನಮ್ಮ ಹಳೇ ಬಾಸ್​​ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ: ಮತ್ತೆ ಎಚ್​​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X