

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಶನಿವಾರ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯಿಂದ ಗಜೇಂದ್ರ ಯಾದವ್ ಹಾಗೂ ಛತ್ತೀಸ್‌ಗಢದಿಂದ ಲಲಿತ್ ಚಂದ್ರಕರ್ ಅವರನ್ನು ನೇಮಕ ಮಾಡಲಾಗಿದೆ.
ನಮ್ಮ ಪಕ್ಷದ ರಾಷ್ಟ್ರೀಯ ಒಬಿಸಿ ಮೋರ್ಚಾದ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ಯಾಗಿ ನೇಮಕಗೊಂಡಿರುವ ಮಾಜಿ ಸಚಿವರು, ಹಿರಿಯ ನಾಯಕರಾದ ಪ್ರಮೋದ್ ಮಧ್ವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಕ್ಸ್ ನಲ್ಲಿ ಅಭಿನಂದನೆ ತಿಳಿಸಿದ್ದಾರೆ.