ಶಂಕರ್ ಬಿದರಿಯ ಅನೈತಿಕ ಅವಾಂತರ, ಅಕ್ರಮಗಳನ್ನು ಬಹಿರಂಗಪಡಿಸುತ್ತೇನೆ: ಸಚಿವ ಎಂ.ಬಿ ಪಾಟೀಲ್ ಸ್ಫೋಟಕ ಪೋಸ್ಟ್!
ಸಿದ್ದಗಂಗಾ ಹಿರಿಯ ಶ್ರೀಗಳ ವಿಷಯದಲ್ಲಿ ನಡೆದ ಷಡ್ಯಂತ್ರದ ಸತ್ಯದರ್ಶನವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಎಂಬಿ ಪಾಟೀಲ್ ಗುಡುಗಿದ್ದಾರೆ.

ಬೆಂಗಳೂರು: ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಮಹಾದೇವ ಬಿದರಿ ಅಪ್ಪಟ ಸುಳ್ಳುಗಾರ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪ್ಪಟ ಸುಳ್ಳುಗಾರ ಶಂಕರ್ ಬಿದರಿ ಎಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಎಂ.ಬಿ.ಪಾಟೀಲ್ ಅವರು, ಬಸವಣ್ಣನನ್ನು ಹೀಯಾಳಿಸಿರುವ ವ್ಯಕ್ತಿ ಜೊತೆ ಕೈಜೋಡಿಸಿರುವ ಇವರು, ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತಮ್ಮ ಮರ್ಯಾದೆ ಉಳಿಸಿಕೊಳ್ಳುವ ಕನಿಷ್ಟ ಸೌಜನ್ಯವೂ ಇಲ್ಲದೆ ಅಸಂಬದ್ಧವಾಗಿ ಮಾತನಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ.
ರಾಜಕಾರಣಿಗಳು ಏನು ಬೇಕಾದರೂ ಮಾತನಾಡುತ್ತಾರೆ ಎನ್ನುವ ಇವರು, 3-4 ಪಕ್ಷಗಳನ್ನು ಬದಲಾಯಿಸಿ, ಚುನಾವಣೆಗೆ ನಿಂತು, ಠೇವಣಿ ಕಳೆದುಕೊಂಡಿರುವ ಹೀನ ಮನಸ್ಸಿನ ವ್ಯಕ್ತಿಯಿಂದ ನಮ್ಮ ಸಮಾಜಕ್ಕೆ ಉಪದೇಶದ ಅವಶ್ಯಕತೆಯಿಲ್ಲ!
ನಮ್ಮ ಪೂರ್ವಜರು ಸಿರಸಂಗಿ ಲಿಂಗರಾಜರು ತಮ್ಮ ಸಮಸ್ತ ಆಸ್ತಿಯನ್ನೇ ಲಿಂಗರಾಜ ಫಂಡ್ ಮೂಲಕ ಸಮಾಜದ ಒಳಿತಿಗೆ-ಶಿಕ್ಷಣಕ್ಕೆ ದಾನ ನೀಡಿದವರು. ಲಿಂಗರಾಜ ಫಂಡ್ ಮೂಲಕ ಶಿಕ್ಷಣ ಪಡೆದ ಬಿದರಿಯ ಎಲ್ಲಾ ದಾನಗಳೂ ಗೊತ್ತಿವೆ ಎಂದು ತಿರುಗೇಟು ನೀಡಿವೆ.
ವಚನಪಿತಾಮಹ ಫ.ಗು. ಹಳಕಟ್ಟಿಯವರ ಕುರಿತು ನಾನು ಮಾಡಿರುವ ಕಾರ್ಯಗಳನ್ನು ಇಡೀ ನಾಡೇ ಗಮನಿಸುತ್ತಿದೆ, ಇವರಿಂದ ಸರ್ಟಿಫಿಕೇಟ್ ಬೇಕಾಗಿಲ್ಲ.
ತಾನು ಸತ್ಯವಂತ, ಬಸವಣ್ಣ ಅನುಯಾಯಿ ಎಂದೆಲ್ಲಾ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಬಿದರಿ ಬಗ್ಗೆ, ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ವೇಳೆ ಇವರು ಮಾಡಿರುವ ಅನಾಚಾರಗಳು, ಅನೈತಿಕ ಅವಾಂತರಗಳು ಮತ್ತು ಅಕ್ರಮಗಳನ್ನು ಮುಂದಿನ ದಿನಗಳಲ್ಲಿ ಜನರಿಗೆ ತಿಳಿಸಲಿದ್ದೇನೆ.
ಸಿದ್ದಗಂಗಾ ಹಿರಿಯ ಶ್ರೀಗಳ ವಿಷಯದಲ್ಲಿ ನಡೆದ ಷಡ್ಯಂತ್ರದ ಸತ್ಯದರ್ಶನವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ.
ಸಿದ್ದಗಂಗಾ ಹಿರಿಯ ಶ್ರೀಗಳನ್ನು ಭೇಟಿ ಮಾಡಿಸುವಂತೆ ಆ ಸಂದರ್ಭದಲ್ಲಿ ನಾನು ಬಿದರಿ ಆಫೀಸಿಗೆ ಹೋಗಿದ್ದೆ ಎಂದು ಹೇಳಿರುವುದು ಹಸಿಸುಳ್ಳು, ನಾನು ಅವರ ಆಫೀಸಿಗೆ ಹೋಗಿಯೇ ಇಲ್ಲ...ಇದು ಅಪ್ಪಟ ಕಟ್ಟುಕಥೆ...!
ನಾನು ಯಾರ ಮನೆಯ ಬಾಗಿಲಿಗೂ ಹೋಗಿ ಸ್ವಾಭಿಮಾನ ಬಿಟ್ಟುಕೊಟ್ಟವನಲ್ಲ. ನನ್ನ ಆತ್ಮಗೌರವವನ್ನು ಬದಿಗಿಟ್ಟು ಯಾರ ಮುಂದೆಯೂ ತಲೆತಗ್ಗಿಸುವಂತಹ ಪ್ರಶ್ನೆಯೇ ಇಲ್ಲ! ಎಂಬಿ ಪಾಟೀಲ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



