ಜನರ ಪ್ರತಿನಿಧಿಯಾಗಿರುವುದೇ ನನಗೆ ಹೆಮ್ಮೆ: ರಾಜ-ಮಹಾರಾಜ ಎಂದು ಎಲ್ಲಿಯೂ ಹೇಳಿಲ್ಲ; ಯದುವೀರ್ ಒಡೆಯರ್
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ನೀಡಿದರೆ, ಮತ್ತೊಂದೆಡೆ ಪುರುಷರ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ. ಯುವನಿಧಿ ಯೋಜನೆಯ ಸ್ಥಿತಿ ಏನಾಗಿದೆ? ಹೊಸ ಯೋಜನೆಗಳ ಘೋಷಣೆಗಳೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ.

ಮಡಿಕೇರಿ: ಜನರಿಂದ ಆಯ್ಕೆಯಾಗಿ ಅವರ ಪ್ರತಿನಿಧಿಯಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದೇ ನನಗೆ ಹೆಮ್ಮೆಯ ವಿಚಾರ. ಕನ್ನಡಿಗನಾಗಿ ಜನರ ಪರವಾಗಿ ಕೆಲಸ ಮಾಡುವುದೇ ನನ್ನ ಆದ್ಯತೆ, ನಾನು ಎಲ್ಲಿಯೂ ನನ್ನನ್ನು ರಾಜ ಅಥವಾ ಮಹಾರಾಜ ಎಂದು ಹೇಳಿಕೊಂಡಿಲ್ಲ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ತಿರುಗೇಟು ನೀಡಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಮಾತನಾಡಿದ ಅವರು, ಮಹಾರಾಜ ಎಂಬ ವಿಚಾರ ಮುಂದಿಟ್ಟುಕೊಂಡು ತಮ್ಮ ವಿರುದ್ಧ ಟೀಕೆ ಮಾಡುತ್ತಿರುವ ಕುರಿತು ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗಳಿಗೆ ತಿರುಗೇಟು ನೀಡಿದರು.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಉಚಿತ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ನೀಡಿದರೆ, ಮತ್ತೊಂದೆಡೆ ಪುರುಷರ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ. ಯುವನಿಧಿ ಯೋಜನೆಯ ಸ್ಥಿತಿ ಏನಾಗಿದೆ? ಹೊಸ ಯೋಜನೆಗಳ ಘೋಷಣೆಗಳೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ.
ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ನೀಡಿದ ಭರವಸೆಗಳಿಗೆ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು. ಇನ್ನು ರಾಹುಲ್ ಗಾಂಧಿ ಅವರಿಗೆ ಬಿರುದು ನೀಡುವ ವಿಚಾರದಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರು ರಾಜ್ಯದ ಜನರ ನೈಜ ಸಮಸ್ಯೆಗಳನ್ನು ಮರೆತಿದ್ದಾರೆ ಎಂದು ಟೀಕಿಸಿದರು.
ರಾಜ್ಯದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ರಾಜಕೀಯ ನಾಯಕತ್ವದ ವಿಚಾರದಲ್ಲೇ ಕಾಂಗ್ರೆಸ್ ಮುಳುಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ, ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದಕ್ಕಿಂತ 16ನೇ ಹಣಕಾಸು ಆಯೋಗದ ಮುಂದೆ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ ಹೆಚ್ಚಿನ ಅನುದಾನ ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



