"ಮೊದಲು ಆಳಂದ ಪ್ರಕರಣಕ್ಕೆ ಉತ್ತರಿಸಿ, ಆಮೇಲೆ ಪ್ರಜಾಪ್ರಭುತ್ವದ ಪಾಠ ಮಾಡಿ": BJP ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಹಿರಿಯ ಬಿಜೆಪಿ ನಾಯಕ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಾರ ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡಲು ಕಲಬುರಗಿಗೆ ಬರುತ್ತಿದ್ದಾರೆ. ಆದರೆ, ಕಲಬುರಗಿಯಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದ ಆರೋಪ ಅವರದೇ ಪಕ್ಷದ ನಾಯಕರ ಮೇಲಿದೆ ಎಂಬುದನ್ನು ಯಾರಾದರೂ ಅವರಿಗೆ ತಿಳಿಸಬೇಕಿದೆ.
ಕಲಬುರಗಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಲಬುರಗಿಗೆ ಭೇಟಿ ನೀಡುತ್ತಿರುವ ಬೆನ್ನಲ್ಲೇ, ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತದಾರರ ಹೆಸರನ್ನು ಅಕ್ರಮವಾಗಿ ಕೈಬಿಟ್ಟಿರುವ ಆರೋಪದ ಕುರಿತು ಬಿಜೆಪಿ ನಾಯಕರು ಜನರಿಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜನಾಥ್ ಸಿಂಗ್ ಅವರು ಕಲಬುರಗಿಗೆ ಭೇಟಿ ನೀಡಿ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಲಿದ್ದಾರೆ. ಆದರೆ, ಕಲಬುರಗಿಯಲ್ಲೇ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ತಮ್ಮದೇ ಪಕ್ಷದ ನಾಯಕರ ಬಗ್ಗೆ ಮೊದಲು ಅವರಿಗೆ ಮಾಹಿತಿ ನೀಡಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಹಿರಿಯ ಬಿಜೆಪಿ ನಾಯಕ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಾರ ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡಲು ಕಲಬುರಗಿಗೆ ಬರುತ್ತಿದ್ದಾರೆ. ಆದರೆ, ಕಲಬುರಗಿಯಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದ ಆರೋಪ ಅವರದೇ ಪಕ್ಷದ ನಾಯಕರ ಮೇಲಿದೆ ಎಂಬುದನ್ನು ಯಾರಾದರೂ ಅವರಿಗೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಜಿಲ್ಲೆಯ ಮಾಜಿ ಬಿಜೆಪಿ ಶಾಸಕರೊಬ್ಬರು ಮತ್ತು ಅವರ ಪುತ್ರನನ್ನು ಮೊದಲ ಹಾಗೂ ಎರಡನೇ ಆರೋಪಿಗಳೆಂದು ಹೆಸರಿಸಲಾಗಿದೆ. ಸುಮಾರು 20 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸುವ ಮೂಲಕ 5,994 ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಲು ಸಂಚು ರೂಪಿಸಲಾಗಿತ್ತು ಎಂಬ ಆರೋಪದ ವಿವರಗಳಿವೆ.
ಆಳಂದ ಮತಗಳ್ಳತನ ಪ್ರಕರಣದಲ್ಲಿ ಜಿಲ್ಲೆಯ ಮಾಜಿ ಬಿಜೆಪಿ ಶಾಸಕ ಮತ್ತು ಅವರ ಪುತ್ರನನ್ನು ಕ್ರಮವಾಗಿ ಮೊದಲ ಮತ್ತು ಎರಡನೇ ಆರೋಪಿಗಳೆಂದು ಹೆಸರಿಸಲಾಗಿದೆ. ಸುಮಾರು 20 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ನಕಲಿ ಅರ್ಜಿಗಳ ಮೂಲಕ 5,994 ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುವ ಸಂಚಿನ ವಿವರಗಳಿವೆ.
ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಲ್ಲಿ ಡಿಜಿಟಲ್ ದಾಖಲೆಗಳು, ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳು, ಹಣಕಾಸಿನ ವಹಿವಾಟುಗಳು, ಪಾವತಿ ವಿವರಗಳು ಹಾಗೂ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ದಾಖಲೆಗಳನ್ನು ಸುಡುತ್ತಿರುವುದನ್ನು ತೋರಿಸುತ್ತದೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ ಎಂದೂ ತಿಳಿಸಿದ್ದಾರೆ.
ಎಸ್ಐಟಿ ತನಿಖೆಯಲ್ಲಿ ಹಲವು ಮಹತ್ವದ ಸಾಕ್ಷ್ಯಗಳು ಪತ್ತೆಯಾಗಿವೆ. ಡಿಜಿಟಲ್ ದಾಖಲೆಗಳು ಮತ್ತು ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳು, ಹಣಕಾಸಿನ ವಹಿವಾಟುಗಳು ಹಾಗೂ ಪಾವತಿಯ ಜಾಡುಗಳು, ಸಾಕ್ಷ್ಯ ನಾಶಪಡಿಸಲು ದಾಖಲೆಗಳನ್ನು ಸುಡುತ್ತಿರುವುದನ್ನು ತೋರಿಸುತ್ತದೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಗಳು ದೊರೆತಿವೆ” ಎಂದು ಉಲ್ಲೇಖಿಸಿದ್ದಾರೆ.
ಸಾವಿರಾರು ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಸಂಘಟಿತ ಪ್ರಯತ್ನ ನಡೆದಿದೆ ಎಂಬುದು ತಮ್ಮ ಆರೋಪವಾಗಿದ್ದು, ಈ ಕುರಿತು ಆರೋಪಪಟ್ಟಿಯಲ್ಲಿ ದಾಖಲಿಸಿರುವ ಸಾಕ್ಷ್ಯಗಳಿಗೆ ಬಿಜೆಪಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದು ಕೇವಲ ಚುನಾವಣಾ ಅಕ್ರಮದ ಆರೋಪವಲ್ಲ. ಸಾವಿರಾರು ಅರ್ಹ ಮತದಾರರನ್ನು ಅವರ ಪ್ರಜಾಸತ್ತಾತ್ಮಕ ಹಕ್ಕಿನಿಂದ ವಂಚಿಸುವ ಸಂಘಟಿತ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.
ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದ ವೇದಿಕೆಯನ್ನು ಬಳಸಿಕೊಂಡು ಆಳಂದ ಪ್ರಕರಣದಲ್ಲಿ ತಮ್ಮ ಪಕ್ಷದ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ರಾಜನಾಥ್ ಸಿಂಗ್ ಉತ್ತರ ನೀಡುತ್ತಾರೆ ಎಂದು ಆಶಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ, ತಮ್ಮನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಮೆರವಣಿಗೆಗಳನ್ನು ಆಯೋಜಿಸುತ್ತಿರುವುದನ್ನೂ ಖರ್ಗೆ ಪ್ರಶ್ನಿಸಿದ್ದಾರೆ. ಮತದಾರರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಧಕ್ಕೆ ತಂದ ಆರೋಪದ ಕುರಿತು ಪಕ್ಷವು ಜನರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
“ಕರ್ನಾಟಕಕ್ಕೆ ಪ್ರಜಾಪ್ರಭುತ್ವದ ಪಾಠ ಹೇಳುವ ಮೊದಲು, ರಾಜ್ಯದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಆಕ್ರಮಣದ ಆರೋಪಗಳಿಗೆ ಬಿಜೆಪಿ ವಿವರಣೆ ನೀಡಬೇಕು. ತನ್ನನ್ನು ಸಮರ್ಥಿಸಿಕೊಳ್ಳಲು ಮೆರವಣಿಗೆಗಳನ್ನು ಆಯೋಜಿಸುವ ಬದಲು, ಆರೋಪಪಟ್ಟಿಯಲ್ಲಿ ದಾಖಲಿಸಿರುವ ಸಾಕ್ಷ್ಯಗಳಿಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


