ರಾಜಕೀಯ

'ಈಗ ನಮ್ಮ ಸರ್ಕಾರ ಇಲ್ಲ, ನಾನು ಮುಖ್ಯಮಂತ್ರಿಯೂ ಅಲ್ಲ': ಮಾಜಿ CM ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ!

'ಈಗ ನಮ್ಮ ಸರ್ಕಾರ ಇಲ್ಲ, ನಾನು ಮುಖ್ಯಮಂತ್ರಿಯೂ ಅಲ್ಲ': ಮಾಜಿ CM ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ!
ಸಿದ್ದರಾಮಯ್ಯ
Published On :

ಬೆಂಗಳೂರು: ಆಶಾ ಕಾರ್ಯಕರ್ತೆಯರು ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಈಗ ನಮ್ಮ ಸರ್ಕಾರ ಇಲ್ಲವಲ್ಲ, ನಾನು ಮುಖ್ಯಮಂತ್ರಿಯೂ ಅಲ್ಲ' ಎಂದು ಶುಕ್ರವಾರ ಹೇಳಿದ್ದಾರೆ.

ಇಂದು ಶಾಸಕರ ಭವನದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ಬಗ್ಗೆ ಮೌನ ವಹಿಸಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ, "ಈಗ ನಮ್ಮ ಸರ್ಕಾರ ಇಲ್ಲವಲ್ಲ, ನಾನು ಮುಖ್ಯಮಂತ್ರಿಯೂ ಅಲ್ಲ. ಪ್ರಸ್ತುತ ಸರ್ಕಾರದ ಮುಖ್ಯಸ್ಥರು ಡಿ.ಕೆ. ಶಿವಕುಮಾರ್ ಅವರಾಗಿದ್ದು, ಅವರೇ ಈ ಸಮಸ್ಯೆಯನ್ನು ಬಗೆಹರಿಸುತ್ತಾರೆ" ಎಂದರು.

ಇದೇ ವೇಳೆ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಪ್ರತಿಕ್ರಿಯಿಸಿ, "ಅದನ್ನು ಸರ್ಕಾರ ನಡೆಸುತ್ತದೆ" ಎಂದು ಚುಟುಕಾಗಿ ಉತ್ತರಿಸಿದರು.

ಇನ್ನು ಸಂಪುಟದಲ್ಲಿ ಖಾಲಿ ಉಳಿದಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, "ಖಾಲಿ ಇರುವ ಎರಡು ಸಚಿವ ಸ್ಥಾನಗಳಲ್ಲಿ ಒಂದನ್ನು ಮಹಿಳೆಗೆ ಹಾಗೂ ಇನ್ನೊಂದನ್ನು ಹಿಂದುಳಿದ ವರ್ಗದವರಿಗೆ ನೀಡಬೇಕು" ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ಸಿಕ್ಕಿರುವ ಕುರಿತು ಮಾತನಾಡಿದ ಅವರು, "ನಾಗೇಂದ್ರ ಅವರು ನಿರಪರಾಧಿ ಎಂದು ನಾನು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ" ಎಂದರು. ಆದರೆ, ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕೇ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.