ರಾಜಕೀಯ

'ಈಗಿನ ಸಂವಿಧಾನ, ಸಂವಿಧಾನದ ಪೀಠಿಕೆ ಅಂಬೇಡ್ಕರ್ ಬರೆದಿದ್ದಲ್ಲ': ಪ್ರತಾಪ್ ಸಿಂಹ ಸ್ಫೋಟಕ ಹೇಳಿಕೆ

'ಈಗಿನ ಸಂವಿಧಾನ, ಸಂವಿಧಾನದ ಪೀಠಿಕೆ ಅಂಬೇಡ್ಕರ್ ಬರೆದಿದ್ದಲ್ಲ': ಪ್ರತಾಪ್ ಸಿಂಹ ಸ್ಫೋಟಕ ಹೇಳಿಕೆ
ಪ್ರತಾಪ್ ಸಿಂಹ, ಸಿದ್ದರಾಮಯ್ಯ
Published On :

ಬೆಂಗಳೂರು: ಸಂವಿಧಾನ ದಿನಾಚರಣೆ ಮತ್ತು ದಲಿತರಿಗೆ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ ಸಿಂಹ, ಸಿದ್ದರಾಮಯ್ಯನವರೇ 'ಈಗಿನ ಸಂವಿಧಾನ, ಸಂವಿಧಾನದ ಪೀಠಿಕೆ ಅಂಬೇಡ್ಕರ್ ಬರೆದಿದ್ದಲ್ಲ. ನಮ್ಮ ಕೈಯಲ್ಲಿರೋದು ಇಂದಿರಾ ಗಾಂಧಿ ಬದಲಾಯಿಸಿದ ಸಂವಿಧಾನ ಪೀಠಿಕೆ ಎಂದರು.

ಇವತ್ತು ನಮ್ಮ ಕೈಯಲ್ಲಿರೋ ಸಂವಿಧಾನ ಅಂಬೇಡ್ಕರ್ ಸಂವಿಧಾನವಾಗಿಯೇ ಉಳಿದಿದೆಯೇ? ಈಗಿನ ಸಂವಿಧಾನ ಪೀಠಿಕೆ ಅಂಬೇಡ್ಕರ್ ಬರೆದಿದ್ದಾ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಸಂವಿಧಾನ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತರತ್ನ ಏಕೆ ನೀಡಲಿಲ್ಲ? ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ಜಾಗ ಏಕೆ ನೀಡಲಿಲ್ಲ? ಸಂವಿಧಾನ ದಿನಾಚರಣೆ ನೀವೇಕೆ ಆಂಭಿಸಲಿಲ್ಲ? ಆದರೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಆರಂಭಿಸಲಾಯಿತು. ಈಗ ಹೇಳಿ ದಲಿತ ವಿರೋಧಿಗಳು ಕಾಂಗ್ರೆಸ್ಸಿಗರ ಅಥವಾ ಬಿಜೆಪಿನಾ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.