ರಾಜಕೀಯ

ಸಚಿವ ಸಂಪುಟದ ಖಾಲಿ 2 ಸ್ಥಾನಗಳನ್ನು ಮಹಿಳೆ ಮತ್ತು OBC ಗೆ ನೀಡಬೇಕು: ಸಿದ್ದರಾಮಯ್ಯ

ಸಚಿವ ಸಂಪುಟದ ಖಾಲಿ 2 ಸ್ಥಾನಗಳನ್ನು ಮಹಿಳೆ ಮತ್ತು OBC ಗೆ ನೀಡಬೇಕು: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಸಚಿವ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳಲ್ಲಿ ಒಂದನ್ನು ಮಹಿಳೆಗೆ ಹಾಗೂ ಮತ್ತೊಂದನ್ನು ಹಿಂದುಳಿದ ವರ್ಗದವರಿಗೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಪುಟಕ್ಕೆ ಒಬ್ಬ ಮಹಿಳೆ ಹಾಗೂ ಒಬ್ಬ ಒಬಿಸಿ ಸದಸ್ಯರನ್ನು ಸೇರ್ಪಡೆಗೊಳಿಸಬೇಕು ಎಂದು ಸಿದ್ದರಾಮಯ್ಯ ಸುದ್ದಿಗಾರರ ಜೊತೆ ನಿನ್ನೆ ಬೆಂಗಳೂರಿನಲ್ಲಿ ಮಾತನಾಡುವ ವೇಳೆ ತಮ್ಮ ಅಭಿಪ್ರಾಯ ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳ ಕುರಿತು ಕೇಳಿದ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು. 34 ಸದಸ್ಯ ಬಲದ ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಪ್ರಸ್ತುತ ಖಾಲಿ ಇವೆ.

ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೂ ಮುನ್ನ ತಮ್ಮ ಸಂಪುಟಕ್ಕೆ ಮಹಿಳೆಯೊಬ್ಬರನ್ನು ಸೇರ್ಪಡೆಗೊಳಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದರು.

ಸಿದ್ದರಾಮಯ್ಯ ಅವರು ತಮ್ಮ ಸಮುದಾಯದವರಾದ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಖಾಲಿ ಇರುವ ಎರಡು ಸ್ಥಾನಗಳನ್ನು ಪರಿಶಿಷ್ಟ ಪಂಗಡ (ST) ಹಾಗೂ ಕುರುಬ ಸಮುದಾಯದ ಶಾಸಕರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

'ಈಗ ನಮ್ಮ ಸರ್ಕಾರ ಇಲ್ಲ, ನಾನು ಮುಖ್ಯಮಂತ್ರಿಯೂ ಅಲ್ಲ': ಮಾಜಿ CM ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ!ಎರಡು ಸ್ಥಾನಗಳಲ್ಲಿ ಒಂದನ್ನು ಎಸ್ಟಿ ಸಮುದಾಯಕ್ಕೆ ನೀಡಬೇಕು ಎಂಬುದು ನಮ್ಮ ಬೇಡಿಕೆ. ಏಕೆಂದರೆ ಎಸ್ಟಿ ಸಮುದಾಯದ ಸದಸ್ಯರ ರಾಜೀನಾಮೆಯಿಂದ ಒಂದು ಸ್ಥಾನ ಖಾಲಿಯಾಗಿದೆ ಎಂದು ವಾಲ್ಮೀಕಿ (ಎಸ್ಟಿ) ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿ, ಬಳ್ಳಾರಿ ಶಾಸಕ ಬಿ. ನಾಗೇಂದ್ರ ಅವರ ನಿರ್ಗಮನವನ್ನು ಉಲ್ಲೇಖಿಸಿ ಹೇಳಿದರು.

ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪೊಲೀಸರು ಕ್ಲೀನ್ ಚಿಟ್ ನೀಡಿದ ಬಳಿಕ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಕಾಂಗ್ರೆಸ್‌ನ ಒಂದು ಬಣ ಬಯಸಿದೆ.

ನಾಗೇಂದ್ರ ಅವರು ಎರಡು ಬಾರಿ ರಾಜೀನಾಮೆ ನೀಡಬೇಕಾಗಿತ್ತು. ಮೊದಲ ಬಾರಿ 2024ರ ಜೂನ್‌ನಲ್ಲಿ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆದ ನಂತರ ಈ ವರ್ಷದ ಆಗಸ್ಟ್‌ನಲ್ಲಿ ಮತ್ತೊಮ್ಮೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.