ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದರಾಮಯ್ಯ

ಕಾಂಗ್ರೆಸ್ ಯಾವುದೇ ಒಂದು ವರ್ಗದ ಪಕ್ಷವಲ್ಲ. ಎಲ್ಲರದು ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಮೈಸೂರು ಜಿಲ್ಲೆಯಲ್ಲೂ ಬಹಳಷ್ಟು ಬಲವಾಗಿದೆ. ಮತ್ತಷ್ಟು ಬಲಪಡಿಸಲು ಅಗತ್ಯ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.
Siddaramaiah
ಸಿದ್ದರಾಮಯ್ಯ
Updated on: 

ಮೈಸೂರು: ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಗ್ರಾಮ ಪಂಚಾಯಿತಿ, ತಾಲೂಕ್ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, 2028ರ ವಿಧಾನಸಭಾ ಹಾಗೂ 2029ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದರು.

ಕಾಂಗ್ರೆಸ್ ಯಾವುದೇ ಒಂದು ವರ್ಗದ ಪಕ್ಷವಲ್ಲ. ಎಲ್ಲರದು ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಮೈಸೂರು ಜಿಲ್ಲೆಯಲ್ಲೂ ಬಹಳಷ್ಟು ಬಲವಾಗಿದೆ. ಮತ್ತಷ್ಟು ಬಲಪಡಿಸಲು ಅಗತ್ಯ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

Siddaramaiah
ಫಲಾನುಭವಿಗಳಿಗೆ 5 ಗ್ಯಾರಂಟಿ ಯೋಜನೆ ತಲುಪಿಸಲು ಸರ್ಕಾರದ ಹೊಸ ಹೆಜ್ಜೆ: ಗ್ರಾಮ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆಗೆ ಸೂಚನೆ..!

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷವಲ್ಲ. ಆ ಪಕ್ಷದ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರಾ? ಒಂದಾದರೂ ಅಣೆಕಟ್ಟು ಕಟ್ಟಿದ್ದೇವೆ ಎಂದು ಬಿಜೆಪಿಯವರು ಹೇಳಲಿ ಎಂದು ಸವಾಲು ಹಾಕಿದರು.

ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಮುಂದುವರೆಸಲಾಗುವುದು ಎಂದು ಈಗಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಹೇಳಿದ್ದಾರೆ. ನಾವು ಕೊಟ್ಟಿರುವ ಮತ್ತಷ್ಟು ಭರವಸೆಗಳನ್ನು ಈಡೇರಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com