ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ ₹800 ಕೋಟಿ ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಸಂತೋಷ್ ಲಾಡ್ ರಾಜೀನಾಮೆ ನೀಡದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ನಡೆಸಲಿದೆ ಎಂದು ಆರಗ ಜ್ಞಾನೇಂದ್ರ ಅವರು ಎಚ್ಚರಿಕೆ ನೀಡಿದರು.
BJP MLA Araga Jnanendra Alleges ₹800 Cr Scam In Labour Department
ಆರಗ ಜ್ಞಾನೇಂದ್ರ
Updated on: 

ಶಿವಮೊಗ್ಗ: ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಬಹುದೊಡ್ಡ ಹಗರಣ ನಡೆದಿದೆ. ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 800 ಕೋಟಿ ರೂಪಾಯಿ ದುರ್ಬಳಕೆ ಆಗಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಿಂದ ನೂರಾರು ಕೋಟಿ ರೂ. ದೆಹಲಿ ಮತ್ತು ಕೇರಳಕ್ಕೆ ವರ್ಗಾವಣೆ ಆಗಿದೆ ಎಂದು ಆರೋಪಿಸಿದ ಆರಗ ಜ್ಞಾನೇಂದ್ರ ಅವರು ಈ ಹಗರಣದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ‘ರಾಜ್ಯದಲ್ಲಿ 27,13,000 ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಒಬ್ಬ ಕಾರ್ಮಿಕನ ಆರೋಗ್ಯ ತಪಾಸಣೆಗೆ 2,950 ರೂಪಾಯಿ ವೆಚ್ಚವಾಗಿದೆ. ಆ ಮೂಲಕ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 3 ವರ್ಷದಲ್ಲಿ 800 ಕೋಟಿ ರೂ. ಹಣ ಲೂಟಿ ಆಗಿದೆ. ಎಂಟು ಏಜೆನ್ಸಿಗಳ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಈ ಹಗರಣ ನಡಿದೆದೆ ಎಂದರು.

BJP MLA Araga Jnanendra Alleges ₹800 Cr Scam In Labour Department
CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಸಂತೋಷ್ ಲಾಡ್ ರಾಜೀನಾಮೆಗೆ ಆಗ್ರಹ

ಈ ಹಗರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ ಬಿಜೆಪಿ ಶಾಸಕ, ಪ್ರಕರಣದಲ್ಲಿ ಐಎಎಸ್​ ಅಧಿಕಾರಿಗಳು ಸೇರಿದಂತೆ ಎಲ್ಲರೂ ಭಾಗಿಯಾಗಿದ್ದಾರೆ. ಈ ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಮತ್ತು ಹಗರಣ ಸಂಬಂಧ ಕಾರ್ಮಿಕ ಸಚಿವ ಸಂತೋಷ್​ ಲಾಡ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಂತೋಷ್ ಲಾಡ್ ರಾಜೀನಾಮೆ ನೀಡದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ನಡೆಸಲಿದೆ ಎಂದು ಆರಗ ಜ್ಞಾನೇಂದ್ರ ಅವರು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com