ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆಂದು ರಾಜಕೀಯ ಮೂಲಗಳು ತಿಳಿಸಿವೆ. ಸರ್ಕಾರದ ಪ್ರತಿಯೊಂದು ಹೆಜ್ಜೆಯನ್ನೂ ನಿಗೂಢವಾಗಿ ಗಮನಿಸಲು ಬೃಹತ್ ಖಾಸಗಿ ಏಜೆನ್ಸಿಗಳನ್ನು ಬಳಸಿಕೊಳ್ಳಲಾಗುತ್ತಿದೆ.
DK Shivakumar
ಡಿ.ಕೆ ಶಿವಕುಮಾರ್
Updated on: 

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್​ ಸರ್ಕಾರದ ಪ್ರಭಾವಿ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮುಖಾಂತರ ರಹಸ್ಯ ಕಾರ್ಯಚರಣೆ ನಡೆಸಲು ವಿಪಕ್ಷಗಳು ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿರುವುದಾಗಿ ತಿಳಿದುಬಂದಿದೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಸಚಿವರಿಗೆ ಕಿವಿಮಾತು ಹೇಳಿದ್ದಾರೆ. ಎರಡು ತಂಡಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರ ಚಲನವಲನದ ಮೇಲೆ ನಿಗಾ ಇಡಲಾಗಿದೆ, ಖಾಸಗಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರು ಹುಷಾರಾಗಿರುವಂತೆ ಸಿಎಂ ಎಚ್ಚರಿಕೆ ನೀಡಿದ್ದಾರೆ

ಅಲ್ಲದೆ, ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆಂದು ರಾಜಕೀಯ ಮೂಲಗಳು ತಿಳಿಸಿವೆ. ಸರ್ಕಾರದ ಪ್ರತಿಯೊಂದು ಹೆಜ್ಜೆಯನ್ನೂ ನಿಗೂಢವಾಗಿ ಗಮನಿಸಲು ಬೃಹತ್ ಖಾಸಗಿ ಏಜೆನ್ಸಿಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಸಚಿವರ ವೈಯಕ್ತಿಕ ಭೇಟಿಗಳು, ಸಾರ್ವಜನಿಕ ಸಂವಾದಗಳು ಮತ್ತು ದೈನಂದಿನ ಚಟುವಟಿಕೆಗಳನ್ನು ಗುರಿಯಾಗಿಟ್ಟುಕೊಂಡು 'ಸ್ಟಿಂಗ್ ಆಪರೇಷನ್' ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿರುವುದಾಗಿ ಸಂಪುಟ ಸಭೆಯಲ್ಲಿ ತಮ್ಮ ಸಚಿವರಿಗೆ ಸಿಎಂ ಡಿಕೆಶಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

DK Shivakumar
SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟವು ಖಾಸಗಿ ಏಜೆನ್ಸಿಗಳ ಮೂಲಕ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸುತ್ತಿವೆ. ಸಚಿವರು ಯಾರನ್ನು ಭೇಟಿಯಾಗುತ್ತಾರೆ? ಎಲ್ಲಿಗೆ ತೆರಳುತ್ತಾರೆ? ಎಂಬ ಪ್ರತಿಯೊಂದು ಚಲನವಲನವನ್ನು ರೆಕಾರ್ಡ್ ಮಾಡಿ ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ನಡೆಸುತ್ತಿವೆ ಎಂದು ಸಿಎಂ ಡಿಕೆಶಿ ಆರೋಪಿಸಿರುವುದಾಗಿ ತಿಳಿದುಬಂದಿದೆ.

ಯಾರೆಲ್ಲಾ ಹುಷಾರಾಗಿರಬೇಕು ಎಂದು ಪ್ರತ್ಯೇಕವಾಗಿ ಸಿಎಂ ಅಲರ್ಟ್ ಮೆಸೇಜ್ ನೀಡಿದ್ದಾರೆ. ಗುಪ್ತಚರ ಮಾಹಿತಿ ಆಧರಿಸಿ ಡಿಕೆಶಿ ಸುಳಿವು ನೀಡಿದ್ದು, ಟಾರ್ಗೆಟ್ ಮಾಡಿರುವ ಐವರು ಸಚಿವರ ಜೊತೆ ಡಿಕೆಶಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಒಟ್ಟಾಗಿ ಹೇಳಿ ಬಳಿಕ ಸಿಎಂ ಆ ಐದು ಸಚಿವರ ಜೊತೆ ಪ್ರತ್ಯೇಕ ಮಾತುಕತೆ ಮಾಡಿ ಬುದ್ಧಿಮಾತು ಹೇಳಿದ್ದಾರೆ.

ಡಿಕೆಶಿ ಮಾತುಕತೆ ನಡೆಸಿರುವ ಆ ಐವರು ಸಚಿವರು ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಇನ್ನೂ ಸಭೆಯಲ್ಲಿದ್ದ ಪ್ರತಿಯೊಬ್ಬ ಸಚಿವರಿಗೂ ತಮ್ಮ ನಡವಳಿಕೆ ಹಾಗೂ ಸಂಭಾಷಣೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ನೀಡಿರುವ ಈ ಸಂದೇಶವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com