ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ..: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಇದೇ ವೇಳೆ ಮತ್ತೆ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಬಿಜೆಪಿಗೆ ವಾಪಸ್ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಹ್ವಾನ ನೀಡಿದ್ದಾರೆ ಎಂದು ಹೇಳಿದ್ದಾರೆ.
KS Eshwarappa
ಕೆಎಸ್ ಈಶ್ವರಪ್ಪ
Updated on: 

ಶಿವಮೊಗ್ಗ: 2028 ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರದಿಂದಲೇ ಸ್ಪರ್ಧಿಸುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ.

ಇದೇ ವೇಳೆ ಮತ್ತೆ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಬಿಜೆಪಿಗೆ ವಾಪಸ್ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಹ್ವಾನ ನೀಡಿದ್ದು, ಈ ಬಗ್ಗೆ ಜನಾಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಆದ ತಪ್ಪುಗಳು ಮರುಕಳಿಸಲ್ಲ ಎಂದು ವಿಜಯೇಂದ್ರ ಭರವಸೆ ನೀಡಿದ್ದು, ಅವರ ಮಾತನ್ನು ನಂಬುತ್ತೇನೆ. ಆದರೆ, ಇನ್ನೂ ಸಮಯವಿದೆ. ಹಿತೈಷಿಗಳ ಬಳಿ, ನಮ್ಮ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯವನ್ನು ಆಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಹಿಂದೆ ಆದ ದ್ರೋಹ ಮತ್ತೆ ಆಗುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

KS Eshwarappa
ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ ₹800 ಕೋಟಿ ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪನವರಿಗೆ ಬಿಜೆಪಿ ಟಿಕೆಟ್ ಸಿಕ್ಕಿರಲಿಲ್ಲ. ಇದಾದ ನಂತರ, ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಪಡೆಯಲು ಪ್ರಯತ್ನಿಸಿದ್ದರು. ಅದೂ ಸಾಧ್ಯವಾಗದ ಹಿನ್ನಲೆಯಲ್ಲಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿದ್ದರು. ಆ ವೇಳೆ, ಬಿಜೆಪಿಯಿಂದ ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com