

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸ್ಟಿಂಗ್ ಆಪರೇಷನ್’ ಮೂಲಕ ಹುದ್ದೆಯಿಂದ ಕೆಳಗಿಳಿಸಲಾಯಿತು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಕುಮಾರಸ್ವಾಮಿ ಅವರ ಹೇಳಿಕೆ ಆಧಾರರಹಿತ ಹಾಗೂ ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್‌ನಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಇಂತಹ ಆರೋಪ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸು ಹಾಗೂ ಜನಬೆಂಬಲ ಯಾವುದೇ ‘ರಹಸ್ಯ ಕಾರ್ಯಾಚರಣೆ’ ಅಥವಾ ಪಿತೂರಿಯನ್ನು ಅವಲಂಬಿಸಿಲ್ಲ. ಕಾಂಗ್ರೆಸ್‌ನಲ್ಲಿ ನಿರ್ಧಾರಗಳನ್ನು ಪಕ್ಷದ ನಿಗದಿತ ಪ್ರಕ್ರಿಯೆಗಳ ಮೂಲಕವೇ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕುಮಾರಸ್ವಾಮಿ ವಿರುದ್ಧ ತಿರುಗೇಟು ನೀಡಿದ ಅವರು, ಹಿಂದೆ ಕೇಳಿಬಂದಿರುವ ಆಡಿಯೋ ರೆಕಾರ್ಡಿಂಗ್‌ಗಳು, ಫೋನ್ ಕದ್ದಾಲಿಕೆ ಹಾಗೂ ಸ್ಟಿಂಗ್ ಆಪರೇಷನ್‌ಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಲ್ಲೇಖಿಸಿದರು.
ಆಡಿಯೋ ರೆಕಾರ್ಡಿಂಗ್, ಫೋನ್ ಕದ್ದಾಲಿಕೆ ಮತ್ತು ಸ್ಟಿಂಗ್ ಆಪರೇಷನ್‌ಗಳಿಗೆ ಸಂಬಂಧಿಸಿದ ವಿವಾದಗಳನ್ನು ಸ್ವತಃ ಎದುರಿಸಿರುವ ಕುಮಾರಸ್ವಾಮಿ, ಇದೀಗ ಇತರರಿಗೆ ರಾಜಕೀಯ ನೈತಿಕತೆಯ ಪಾಠ ಹೇಳುತ್ತಿರುವುದು ವಿಪರ್ಯಾಸ” ಎಂದು ಹೇಳಿದರು.
ಕುಮಾರಸ್ವಾಮಿ ಅವರ ಹೇಳಿಕೆಗಳು ತಮ್ಮ ಮಿತ್ರ ಪಕ್ಷ ಬಿಜೆಪಿಯನ್ನು ಮೆಚ್ಚಿಸುವ ಹಾಗೂ ಕೇಂದ್ರ ಸರ್ಕಾರದಲ್ಲಿನ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಉದ್ದೇಶ ಹೊಂದಿವೆ ಗ್ರೆಸ್‌ನಲ್ಲಿ ಕಾಲ್ಪನಿಕ ಪಿತೂರಿಗಳನ್ನು ಸೃಷ್ಟಿಸುವ ಬದಲು ಕುಮಾರಸ್ವಾಮಿ ಮೊದಲು ತಮ್ಮದೇ ರಾಜಕೀಯ ಮನೆಯನ್ನು ಸರಿಪಡಿಸಿಕೊಳ್ಳಲಿ. ಕಾಂಗ್ರೆಸ್ ಒಗ್ಗಟ್ಟಿನಿಂದಿದ್ದು, ಇಂತಹ ಹೇಳಿಕೆಗಳ ಮೂಲಕ ಪಕ್ಷದೊಳಗೆ ವಿಭಜನೆ ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದರು.