ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

ಬಿಜೆಪಿ ಕಚೇರಿಯಿಂದ ನಾವು ನೇಮಕ ಮಾಡಿರುವವರು ಫಾರ್ಮ್‌ 7 ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ.
Yaduveer Wadiyar
ಯದುವೀರ್ ಒಡೆಯರ್
Updated on: 

ಮಡಿಕೇರಿ: ಸರಿಯಾದ ಸಾಕ್ಷಿ ಆಧಾರವಿಲ್ಲದೇ ಫಾರ್ಮ್‌-7 ದುರ್ಬಳಕೆ ಎಂದು ಆರೋಪ ಮಾಡುವುದು ಸರಿಯಲ್ಲ. ಬೇಕಾದರೆ ನೀವೂ ನನ್ನ ವಿರುದ್ಧವೂ ಫಾರ್ಮ್‌ 7 ಮೂಲಕ ಆಕ್ಷೇಪಗಳನ್ನು ಸಲ್ಲಿಸಿ ಎಂದು ಮೈಸೂರು–ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ಗೆ ನೇರವಾಗಿಯೇ ಸವಾಲು ಹಾಕಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ಆಕ್ಷೇಪಣೆ ಸಲ್ಲಿಸಿದ ನಂತರ ಅದು ಸುಳ್ಳೋ, ನಿಜವೋ ಎಂದು ಪರಿಶೀಲಿಸಿ ತೀರ್ಮಾನಿಸುವುದು ಚುನಾವಣಾ ಆಯೋಗ. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ಕೇವಲ ಆಕ್ಷೇಪಗಳನ್ನು ವ್ಯಕ್ತಪಡಿಸುವುದಕ್ಕಾಗಿ ಇರುವುದು ಫಾರ್ಮ್‌ 7. ರಾಜ್ಯ ಸರ್ಕಾರದ ಅಧಿಕಾರಿಗಳು ಫಾರ್ಮ್‌ 7 ಕೊಡುತ್ತಾರೆ ಮತ್ತು ನಿರ್ಣಯಿಸುತ್ತಾರೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ‌ ಮತ್ತು ಆತಂಕ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.

Yaduveer Wadiyar
ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಬಿಜೆಪಿ ಕಚೇರಿಯಿಂದ ನಾವು ನೇಮಕ ಮಾಡಿರುವವರು ಫಾರ್ಮ್‌ 7 ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ. ಬಿಜೆಪಿ ಕಚೇರಿಯಿಂದಲೇ ಫಾರ್ಮ್‌ಗಳನ್ನ ದುರ್ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಕಾನೂನುಬದ್ಧವಾಗಿ ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆಯಲ್ಲಿ ನಾವು ಕೂಡ ನಮ್ಮ ಕೆಲಸ ಮುಂದುವರಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಕೇಂದ್ರದಲ್ಲಿ ಬಿಜೆಪಿಯ ಸತತ ಗೆಲುವನ್ನು ಸಹಿಸಲಾಗದ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳಿಗೆ ಸರಿಯಾದ ರೀತಿಯಲ್ಲಿ ಚುನಾವಣೆ ಎದುರಿಸಲು ಸಾಮರ್ಥ್ಯ ಇಲ್ಲ. ಬೀದಿಯಲ್ಲಿ ನಿಂತು ಅರ್ಧ ಸತ್ಯ ಹೇಳುವುದು ಮತ್ತು ಅಪಪ್ರಚಾರ ಮಾಡುವುದೇ ಈಗ ಅವರ ಅಸ್ತ್ರಗಳಾಗಿವೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com