CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ತಮ್ಮ ಮುಂದೆ ಬಂದ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಅವರು ಕುರ್ತಾ ಹಿಡಿದು ಎಳೆದು, ಹಿಂದಕ್ಕೆ ತಳ್ಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
CM DK Shivakumar pushed, manhandled while walking with Rahul Gandhi during protest
ಡಿಕೆ ಶಿವಕುಮಾರ್ - ರಾಹುಲ್ ಗಾಂಧಿ
Updated on: 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸೋಮವಾರ ಸುಪ್ರೀಂ ಕೋರ್ಟ್‌ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದ್ದವು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಶಶಿ ತರೂರ್, ಸಚಿನ್ ಪೈಲಟ್ ಮತ್ತು ಮುಕುಲ್ ವಾಸ್ನಿಕ್, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿలేಶ್ ಯಾದವ್ ಮತ್ತು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ 'ಇಂಡಿಯಾ' (INDIA) ಮೈತ್ರಿಕೂಟದ ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಸಾವಿರಾರು ನಾಯಕರು ಹಾಗೂ ಕಾರ್ಯಕರ್ತರ ಜೊತೆ ಸುಪ್ರೀಂ ಕೋರ್ಟ್​ನತ್ತ ಹೊರಟಿದ್ದ ಈ ರ‍್ಯಾಲಿಯಲ್ಲಿ ತೀವ್ರ ನೂಕುನುಗ್ಗಲು ಉಂಟಾಯಿತು. ರಾಹುಲ್ ಗಾಂಧಿಯವರನ್ನೂ ಕಾಂಗ್ರೆಸ್ ಕಾರ್ಯಕರ್ತರು ತಳ್ಳಾಡಿದರು. ಈ ವೇಳೆ ಅವರ ಪಕ್ಕದಲ್ಲಿಯೇ ಇದ್ದ ಸಿಎಂ ಡಿಕೆ ಶಿವಕುಮಾರ್ ಕಾರ್ಯಕರ್ತರ ತಳ್ಳಾಟದಲ್ಲಿ ಕೆಳಗೆ ಬೀಳುವಂತಾದರು. ಡಿಕೆ ಶಿವಕುಮಾರ್ ಅವರಿಗೆ ಆ ತಳ್ಳಾಟದಲ್ಲಿ ನಿಲ್ಲಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

CM DK Shivakumar pushed, manhandled while walking with Rahul Gandhi during protest
Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಈ ವೇಳೆ ತಮ್ಮ ಮುಂದೆ ಬಂದ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಅವರು ಕುರ್ತಾ ಹಿಡಿದು ಎಳೆದು, ಹಿಂದಕ್ಕೆ ತಳ್ಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ರಾಹುಲ್‌ ಗಾಂಧಿ ಅವರಿಂದ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರೆಸ್ಪೆಕ್ಟೆ ಇಲ್ಲ, ಫುಲ್‌ ಅನ್‌ ರೆಸ್ಪೆಕ್ಟು! ಎಂದು ವ್ಯಂಗ್ಯವಾಡಿದೆ.

ಇನ್ನು ಇದೇ ವಿಡಿಯೋವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಸಹ ಹಂಚಿಕೊಂಡಿದ್ದು, ದೆಹಲಿಯಲ್ಲಿ ಬಂಡೆಗೆ ಸಿಕ್ಕ ಮರ್ಯಾದೆ ಇದು! ಎಂದು ಕುಟುಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com