ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ನಿಜ: ಶೀಘ್ರವೇ ಮಾತೃ ಪಕ್ಷಕ್ಕೆ ಮಾಜಿ ಶಾಸಕ ರಘುಪತಿ ಭಟ್ ಗುಡ್ ಬೈ?

ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದು ಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ.
Raghupathi bhat
ರಘುಪತಿ ಭಟ್
Updated on: 

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ, ಬಿಜೆಪಿ ಮತ್ತು ಸಂಘ ಪರಿವಾರದ ಪ್ರಮುಖ ನಾಯಕರೆಂದೆ ಗುರುತಿಸಲ್ಪಟ್ಟಿದ್ದ ಮಾಜಿ ಶಾಸಕ ರಘುಪತಿ ಭಟ್, ಅವರ ವಿಚಾರದಲ್ಲಿ ಹೊಸ ಸುದ್ದಿಯೊಂದು ವೈರಲ್ ಆಗುತ್ತಿದೆ.

ಅವರು ತಮ್ಮ ಹಿಂದಿನ ಪಕ್ಷ ಬಿಜೆಪಿ ಮತ್ತು ಮಾತೃ ಸಂಘಟನೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಯಿಂದ ದೂರ ಸರಿದು, ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರಾ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದು ಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿ ಕಡೆಯಿಂದಲೂ ಕರೆಯುವ ನಿರೀಕ್ಷೆಯಲ್ಲಿದ್ದೇನೆ. ಬಿಜೆಪಿ ಆಹ್ವಾನ ನೀಡಿದರೆ ಅದರ ಬಗ್ಗೆಯೂ ಯೋಚಿಸಬಹುದು ಎಂದು ಹೇಳಿದರು.

Raghupathi bhat
ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿಯೂ ಆಯ್ಕೆಯಾಗಿ ದ್ದೇನೆ.

ಹೀಗಿರುವಾಗ ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನ ಮನಸ್ಸಿಗೂ ಅದು ಒಪ್ಪುವುದಿಲ್ಲ. ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಯಾವುದೇ ನಿರ್ಧಾರ ಕೈಗೊಳ್ಳುತ್ತೇನೆ ಎಂದು ರಘುಪತಿ ಭಟ್ ಸ್ಪಷ್ಟಪಡಿಸಿದರು.

2023ರ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಲಿಲ್ಲ, ಇದು ಪಾರ್ಟಿಯ ನಿರ್ಧಾರ ಎಂದು, ಯಶಪಾಲ್ ಸುವರ್ಣ ಅವರ ಪರವಾಗಿ ನಿರಂತರ ಪ್ರಚಾರವನ್ನು ಮಾಡಿದೆ. ಅವರು ಚುನಾವಣೆ ಗೆಲ್ಲುವುದಕ್ಕೆ ನನ್ನ ಪರಿಶ್ರಮವೂ ಇದೆ. ಆದರೆ, ಚುನಾವಣೆ ಗೆದ್ದ ಮೇಲೆ ಅವರು ನಡೆದುಕೊಂಡ ರೀತಿಯಿಂದ ನನಗೆ ದುಃಖವಾಗಿದೆ. ನನಗೆ ಕನಿಷ್ಠ ಗೌರವವನ್ನೂ ಅವರು ಕೊಡದೇ ಹೋದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com