15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಎಂಬ ಕಾವು ಜೋರಾಗಿ ನಡೆಯುತ್ತಿದೆ. ರಾಜಕಾರಣಿಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮಾತನಾಡಿ, ಕರ್ನಾಟಕದ ರಾಜಕೀಯ ಈ ಹಂತಕ್ಕೆ ಬರಬಾರದಾಗಿತ್ತು ಎಂದು ಹೇಳಿದ್ದಾರೆ.
BK Hariprasad-Siddaramaiah
ಬಿಕೆ ಹರಿಪ್ರಸಾದ್, ಸಿದ್ದರಾಮಯ್ಯ
Updated on: 

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಎಂಬ ಕಾವು ಜೋರಾಗಿ ನಡೆಯುತ್ತಿದೆ. ರಾಜಕಾರಣಿಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮಾತನಾಡಿ, ಕರ್ನಾಟಕದ ರಾಜಕೀಯ ಈ ಹಂತಕ್ಕೆ ಬರಬಾರದಾಗಿತ್ತು. ಸಾರ್ವಜನಿಕ ಕ್ಷೇತ್ರದಲ್ಲಿ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ರಾಜಕೀಯದಲ್ಲಿ ಸೇಡು ತೀರಿಸಿಕೊಳ್ಳಲು ಹಲವು ದಿಕ್ಕುಗಳು ಇವೆ. ಆದರೆ 15 ವರ್ಷಗಳ ಹಿಂದಿನ ಘಟನೆ ಇಟ್ಟುಕೊಂಡು ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಸರಿಯಲ್ಲ. ತನಿಖೆಯ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ರೀತಿಯ ಕೆಸರೆರೆಚಾಟ ಸರಿಯಲ್ಲ. ರಾಜಕೀಯ ತೆವಲಿಗೆ ಹೀಗೆಲ್ಲಾ ಮಾಡುತ್ತಿದ್ದಾರೆ. ಸ್ಟಿಂಗ್ ಆಪರೇಷನ್ ಬಗ್ಗೆ ರಾಜಕೀಯ ಕೆಸರೆರಚಾಟ ನಡೆಸುವುದು ಸರಿಯಲ್ಲ ಎಂದು ಬಿ.ಕೆ. ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

BK Hariprasad-Siddaramaiah
ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

ಮತ್ತೊಂದೆಡೆ, ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಬೆಳಗ್ಗೆಯಿಂದಲೇ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರು, ಇದೀಗ ಮತ್ತೊಂದು ಹೆಜ್ಜೆ ಮುಂದೆ, 'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ, ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್ ಎಂದು ಗುಡುಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com