ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸಂಶಯ ಬಂದರೆ ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.
H D Kumaraswamy and Priyank Kharge
ಎಚ್ ಡಿ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ
Updated on: 

ಬೆಂಗಳೂರು: ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿವೆ.

ಕುಮಾರಸ್ವಾಮಿ ಅವರ ಎಲ್ಲಾ ಆರೋಪಕ್ಕೆ ಉತ್ತರ ಕೊಡುವುದಕ್ಕೆ ಆಗಲ್ಲ. ನಮಗೆ ದೂರು ಬಂದಿದೆ. ಹೀಗಾಗಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಸಂಶಯ ಬಂದರೆ ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕುಮಾರಸ್ವಾಮಿ ಅವರು ಏಕವಚನದಲ್ಲಿ ಮಾತನಾಡಿದ ತಕ್ಷಣ ಪ್ರಿಯಾಂಕ್ ಖರ್ಗೆ ಹೆದರಿಕೊಳ್ಳುತ್ತಾನೆ, ನಮ್ಮನ್ನು ಹೆದರಿಸಬಹುದು, ಬೆದರಿಸಬಹುದು ಅಂದುಕೊಂಡಿದ್ದರೆ ಅದು ಅವರ ಭ್ರಮೆ. ಅವರು ಮರ್ಯಾದೆ ಕೊಟ್ಟು ಮಾತನಾಡಿದರೆ ನಾವು ಕೇಳಲು ರೆಡಿ ಇದ್ದೇವೆ. ಆದರೆ ಅವರು ನಮಗೆ ಯಾವ ಭಾಷೆಯಲ್ಲಿ ಮಾತನಾಡುತ್ತಾರೋ, ಅದೇ ಭಾಷೆಯಲ್ಲಿ ಅವರಿಗೆ ಪ್ರತ್ಯುತ್ತರ ನೀಡಲು ನಾವು ಸಂಪೂರ್ಣ ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.

H D Kumaraswamy and Priyank Kharge
ಸ್ಟಿಂಗ್‌ ಆಪರೇಷನ್‌ ಕೇಸ್ ನಲ್ಲಿ ನನ್ನನ್ನು ಸಿಲುಕಿಸುವ ಸಂಚು: ನನ್ನನ್ನ ರೇವಣ್ಣನಂತೆ ಜೈಲಿಗೆ ಕಳುಹಿಸಲು ಸಾಧ್ಯವೇ? ಕುಮಾರಸ್ವಾಮಿ

'ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಲಿ' ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, "ಸುಮ್ಮನೆ ಬಂಧಿಸಲು ಹೇಗೆ ಸಾಧ್ಯ? ಅರೆಸ್ಟ್ ಮಾಡುವುದನ್ನು ಅವರಿಂದ ನಾನು ಕಲಿಯಬೇಕಾಗಿಲ್ಲ. ಮೊದಲು ತಾಕತ್ತಿದ್ದರೆ ನಿಮ್ಮ ಬಳಿ ಇರುವ ದಾಖಲೆಗಳನ್ನು ಕೊಡಿ. ನಿಮ್ಮ ಬಳಿ ಸಾಕ್ಷ್ಯಾಧಾರಗಳಿದ್ದು, ನೀವು ತಪ್ಪು ಮಾಡಿದ್ದರೆ ನಿಮ್ಮನ್ನು ಖಂಡಿತವಾಗಿಯೂ ಅರೆಸ್ಟ್ ಮಾಡೇ ಮಾಡುತ್ತೇವೆ. ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಬಿಟ್ಟು ಮಾಹಿತಿ ಹಾಗೂ ದಾಖಲೆಗಳಿದ್ದರೆ ಕೊಡಿ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ದಾಖಲೆಗಳಿದ್ದರೆ ಕಮೀಷನರ್‌ ಕಚೇರಿಯಲ್ಲೇ ದೂರು ಕೊಡಲಿ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com