

ಶ್ರೀರಂಗಪಟ್ಟಣ : ಸ್ಟಿಂಗ್ ಆಪರೇಷನ್ಗೂ ಡಿ.ಕೆ. ಶಿವಕುಮಾರ್ ಅವರಿಗೂ ಏನು ಸಂಬಂಧ? ಸಿದ್ದರಾಮಯ್ಯ ಅವರನ್ನು ಒಲಿಸಿಕೊಳ್ಳುವ ಸಲುವಾಗಿ ಎಚ್.ಡಿ. ಕುಮಾರಸ್ವಾಮಿ ವ್ಯವಸ್ಥಿತವಾಗಿ, ಜೆಡಿಎಸ್ ಕಾರ್ಯಕರ್ತರ ಮೂಲಕ ಸಿ.ಡಿ ಬಿಡುಗಡೆ ಮಾಡಿ, ಇದೀಗ ಡಿ.ಕೆ ಶಿವಕುಮಾರ್ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.
ಕುಮಾರಸ್ವಾಮಿ ಅವರಿಗೆ ಕಾಮನ್ ಸೆನ್ಸ್ ಇಲ್ಲ, ಏನು ಮಾತನಾಡುತ್ತಾರೆ ಅಂತ ಅವರಿಗೇ ಗೊತ್ತಿಲ್ಲ. ಸಾಮಾನ್ಯ ತಿಳಿವಳಿಕೆ ಇದ್ದರೆ ಹಾಸನದಲ್ಲಿ ಸಿಡಿ ವಿತರಣೆ ಮಾಡಿದವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ.
ಸಿ.ಡಿ ಬಿಡುಗಡೆ ಮಾಡಿದ್ದು ಜೆಡಿಎಸ್ ಸೋಷಿಯಲ್ ಮೀಡಿಯಾ. ಇದೀಗ ಅನುಕಂಪ ತೋರಿಸುತ್ತಿದ್ದಾರೆ. ಹೆಣ್ಣು ಮಕ್ಕಳ ಮೇಲೆ ಅನುಕಂಪ ಏಕಿಲ್ಲ?. ನಮ್ಮ ಮನೆಯ ಮಗ ಇಂತಹ ಕೆಲಸ ಮಾಡಿದ್ದು ತಪ್ಪು ಎಂದು ಅವರ ಕುಟುಂಬ ನಾಡಿನ ಜನತೆಗೆ ಕ್ಷಮೆ ಕೇಳಿದ್ದಾರಾ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ವಿಷಯದಲ್ಲಿ ಕುಮಾರಸ್ವಾಮಿ ಅವರ ಹಸ್ತಕ್ಷೇಪವಿಲ್ಲದೆ ಜೆಡಿಎಸ್ ಕಾರ್ಯಕರ್ತರು ಹಂಚಿಕೆ ಮಾಡಿದ್ದಾರೆಯೇ? ಪೊಲೀಸರು ದಸ್ತಗಿರಿ ಮಾಡಿ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ. ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ. ಕುಮಾರಸ್ವಾಮಿ ಅವರು ಕೇಂದ್ರ ಸಿಬಿಐಗೆ ಕೊಟ್ಟು, ತನಿಖೆ ಮಾಡಿಸಲಿ ನಾವು ಅಡ್ಡಿ ಪಡಿಸುವುದಿಲ್ಲ ಎಂದಿದ್ದಾರೆ.