ಹಾವೇರಿ ಪಶ್ಚಿಮ ಪದವೀಧರರ ಚುನಾವಣೆ; ಸಚಿವ ರುದ್ರಪ್ಪ ಲಮಾಣಿ ಸಮ್ಮುಖದಲ್ಲೇ ನಕಲಿ ವೋಟಿಂಗ್..? ತನಿಖೆಗೆ BJP ಬಿಗಿ ಪಟ್ಟು..!

ನಕಲಿ ಮತದಾನದ ಕುರಿತು ಯಾವುದೇ ದೂರು ಬಂದಿರಲಿಲ್ಲ. ಇದೀಗ ಈ ವಿಚಾರ ತಿಳಿದಿರುವುದರಿಂದ ತನಿಖೆ ನಡೆಸಲಾಗುವುದು. ಮತಗಟ್ಟೆಯ ಅಧ್ಯಕ್ಷಾಧಿಕಾರಿ ವಿರುದ್ಧ ದೂರು ದಾಖಲಿಸಲಾಗುವುದು.
Minister Rudrappa Lamani (left) with the woman accused of casting a bogus vote in Haveri on Saturday
ನಕಲಿ ಮತ ಚಲಾಯಿಸಿದ ಆರೋಪ ಹೊತ್ತಿರುವ ಮಹಿಳೆಯೊಂದಿಗೆ ಸಚಿವ ರುದ್ರಪ್ಪ ಲಮಾಣಿ.
Updated on: 

ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ವೇಳೆ ಹಾವೇರಿ ತಹಶೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿ ಶನಿವಾರ ನಕಲಿ ಮತದಾನ ನಡೆದಿರುವ ಆರೋಪ ಕೇಳಿಬಂದಿದೆ.

ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರೊಂದಿಗೆ ಮತಗಟ್ಟೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಮತ್ತೊಬ್ಬರ ಹೆಸರಿನಲ್ಲಿ ಮತ ಚಲಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೆರಳಗಿ ಅವರ ಪತ್ನಿ ಆಶಾ ಪಾಟೀಲ್ ಅವರ ಹೆಸರಿನಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಶಾ ಪಾಟೀಲ್ ಅವರ ಹೆಸರಿನ ನಕಲಿ ಗುರುತಿನ ಚೀಟಿಯನ್ನು ಬಳಸಿ ಮತ ಚಲಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಜೀವಕುಮಾರ ನೆರಳಗಿ, ತಮ್ಮ ಪತ್ನಿಯ ಹೆಸರಿನಲ್ಲಿ ನಕಲಿ ಮತ ಚಲಾಯಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ನಡುವೆ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ತನಿಖೆಗೆ ಆಗ್ರಹಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರು ಕಾಂಗ್ರೆಸ್ ನಾಯಕರು ಹಾಗೂ ಚುನಾವಣಾಧಿಕಾರಿಗಳು ಚುನಾವಣಾ ಅಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Minister Rudrappa Lamani (left) with the woman accused of casting a bogus vote in Haveri on Saturday
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ದೇವಸ್ಥಾನದಿಂದ ಹಿಂತಿರುಗುತ್ತಿದ್ದ ನವ ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ!

ಹಾವೇರಿ ತಹಶೀಲ್ದಾರ್ ಕಚೇರಿಯ 85ನೇ ಮತಗಟ್ಟೆಯಲ್ಲಿ ನಕಲಿ ಮತದಾನ ನಡೆದಿದೆ. ಶಿಲ್ಪಾ ಬಾದಮ್ಮನವರ ಎಂಬ ಮಹಿಳೆ ಆಶಾ ಪಾಟೀಲ್ ಅವರ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಕಲಿ ಮತದಾನದ ಕುರಿತು ಯಾವುದೇ ದೂರು ಬಂದಿರಲಿಲ್ಲ. ಇದೀಗ ಈ ವಿಚಾರ ತಿಳಿದಿರುವುದರಿಂದ ತನಿಖೆ ನಡೆಸಲಾಗುವುದು. ಮತಗಟ್ಟೆಯ ಅಧ್ಯಕ್ಷಾಧಿಕಾರಿ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಲ್. ನಾಗರಾಜ್ ತಿಳಿಸಿದ್ದಾರೆ.

ಬಿಜೆಪಿ ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಾರೆ. ಆದರೆ, ಇದೀಗ ಅವರೇ ಮತಗಳ್ಳತನದಲ್ಲಿ ತೊಡಗಿದ್ದಾರೆ ಎಂಬುದು ಬೆಳಕಿಗೆ ಬಂದಿದೆ” ಎಂದು ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದ್ದಾರೆ.

ಈ ಅಕ್ರಮದಲ್ಲಿ ಚುನಾವಣಾಧಿಕಾರಿಗಳೂ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಅವರು, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಕ್ಟೋಬರ್ 26ರಂದು ಬಿಜೆಪಿ ಪ್ರತಿಭಟನೆ

ಏತನ್ಮಧ್ಯೆ ಈ ಅಕ್ರಮವನ್ನು ಖಂಡಿಸಿ, ಅಕ್ಟೋಬರ್ 26ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com