ಮುಖ್ಯಮಂತ್ರಿ ಡಿಕೆ.ಶಿವಕುಮಾರ್‌ಗೆ ಬೆಂಗಳೂರೇ ಇಡೀ ಕರ್ನಾಟಕ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದೆ. ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷ ಉಪಮುಖ್ಯಮಂತ್ರಿಯಾಗಿ ಹಾಗೂ ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
BY. Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Updated on

ಕೊಪ್ಪಳ: ಕರ್ನಾಟಕದಲ್ಲಿ ಆಡಳಿತ ಮತ್ತು ಅಭಿವೃದ್ಧಿಯ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನತ್ತ ಹೆಚ್ಚಿನ ಗಮನ ಹರಿಸುತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಗಂಗಾವತಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಶಿವಕುಮಾರ್‌ಗೆ ಬೆಂಗಳೂರೇ ಇಡೀ ಕರ್ನಾಟಕ” ಎಂದು ಟೀಕಿಸುವ ಮೂಲಕ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದೆ. ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷ ಉಪಮುಖ್ಯಮಂತ್ರಿಯಾಗಿ ಹಾಗೂ ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆದರೆ, ಉತ್ತರ ಕರ್ನಾಟಕದ ಯಾದಗಿರಿ, ಗದಗದಂತಹ ಜಿಲ್ಲೆಗಳ ಬಗ್ಗೆಯೂ ಅವರಿಗೆ ಸರಿಯಾಗಿ ತಿಳಿದಿಲ್ಲವೆಂಬಂತೆ ಕಾಣುತ್ತಿದೆ. ರೈತರ ಸಂಕಷ್ಟವನ್ನು ಪರಿಹರಿಸಲು ಸರ್ಕಾರಕ್ಕೆ ಒಂದೇ ಒಂದು ಯೋಜನೆಯನ್ನೂ ಜಾರಿಗೆ ತರಲು ಸಾಧ್ಯವಾಗಿಲ್ಲ. ಬರಗಾಲದ ಸಂದರ್ಭದಲ್ಲಿ ರೈತರು ಬದುಕಿದ್ದಾರೆಯೇ, ಸತ್ತಿದ್ದಾರೆಯೇ ಎಂದು ವಿಚಾರಿಸಲು ಒಬ್ಬ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡಲಿಲ್ಲ ಎಂದು ಕಿಡಿಕಾರಿದರು.

BY. Vijayendra
ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com