

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (ಡಿಸಿಸಿ) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಪ್ರಸ್ತುತ ನಡೆಯುತ್ತಿರುವ ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿಗಳನ್ನು ಮಾಡಲಾಗಿದೆ.
AICC ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಪ್ರತಿ ಜಿಲ್ಲೆಯಲ್ಲೂ ನಿಯೋಜಿಸಲಾಗಿದ್ದ AICC ವೀಕ್ಷಕರು ನಡೆಸಿದ ವ್ಯಾಪಕ ಕ್ಷೇತ್ರಕಾರ್ಯ ಹಾಗೂ ಸಮಗ್ರ ಪರಿಶೀಲನೆಯ ಆಧಾರದ ಮೇಲೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ.
ಕಾಂಗ್ರೆಸ್ ಪಕ್ಷ ಕೈಗೊಂಡಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ಈ ಅಭಿಯಾನದ ಅಡಿಯಲ್ಲಿ ಪ್ರತಿ ಜಿಲ್ಲೆಗೂ ಎಐಸಿಸಿ ವೀಕ್ಷಕರನ್ನು ನೇಮಿಸಲಾಗಿತ್ತು.
ವೀಕ್ಷಕರು ಸ್ಥಳೀಯ ಮಟ್ಟದಲ್ಲಿ ಕೂಲಂಕಷ ಪರಿಶೀಲನೆ ನಡೆಸಿ, ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರೊಂದಿಗೆ ಚರ್ಚಿಸಿ ಸಮಗ್ರ ವರದಿ ಸಲ್ಲಿಸಿದ್ದರು.
ಈ ವರದಿಗಳ ಆಧಾರದ ಮೇಲೆ ಹಿರಿಯ ನಾಯಕರೊಂದಿಗೆ ವಿಸ್ತೃತ ಸಮಾಲೋಚನೆ ನಡೆಸಿದ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.