

ಬೆಂಗಳೂರು: ನನ್ನದೇ ತಪ್ಪಿನಿಂದ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿ ಇಲ್ಲ. ಇದು ದೆಹಲಿಯ ಹೈಕಮಾಂಡ್ ತಪ್ಪಲ್ಲ, ನನ್ನ ತಪ್ಪು. ನಾನೇ ಒಬ್ಬ ಅಭ್ಯರ್ಥಿಯನ್ನು ಫೈನಲ್ ಮಾಡಲು ಸಾಧ್ಯವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳಿದ್ದರು, ಹೀಗಾಗಿ ಸಾಧ್ಯವಾಗಲಿಲ್ಲ. ಆದರೆ ಮಹಿಳೆಗೆ ಸಚಿವ ಸ್ಥಾನ ನೀಡುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸ್ತೇವೆ. ಮಹಿಳಾ ಸಬಲೀಕರಣದ ವಿಚಾರದಲ್ಲಿ ಅತ್ಯಂತ ಗಂಭೀರವಾಗಿದ್ದೇವೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದರು. ಹೀಗಾಗಿ ಕುಮಾರಸ್ವಾಮಿಗೆ ಮಾತನಾಡುವ ಹಕ್ಕಿಲ್ಲ ಎಂದವರು ತಿಳಿಸಿದ್ದಾರೆ.
ಇನ್ನೂ ಯುಪಿಐ ಟ್ರಾನ್ಸಾಕ್ಷನ್ಗೂ ಟ್ಯಾಕ್ಸ್ ವಿಧಿಸಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು . ಇದು ದೇಶದ ಜನರಿಗೆ ಮಾಡಿದ ಮೋಸ ಆರೋಪಿಸಿದ್ದಾರೆ. ಬಡವರು, ಮಧ್ಯಮವರ್ಗ ಸೇರಿ ಎಲ್ಲರ ಮೇಲೂ ಇದರ ಪರಿಣಾಮ ಆಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಅಮೆರಿಕ ಕಂಪನಿಗಳಿಗೆ ಸರೆಂಡರ್ ಆಗಿದೆ.
ಯುಪಿಐ ಟ್ರಾನ್ಸಾಕ್ಷನ್ ಮೇಲೆ ಟ್ಯಾಕ್ಸ್ನಿಂದ ಜನರಿಗೆ ಹೊರೆಯಾಗಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ 0.4% ಶುಲ್ಕ ವಿಧಿಸುವುದರಿಂದ ಟ್ರಾನ್ಸಾಕ್ಷನ್ ಟ್ಯಾಕ್ಸ್ ಮುಂದೆ ಎಲ್ಲರಿಗೂ ವಿಸ್ತರಣೆ ಮಾಡುವ ಆತಂಕ ಎದುರಾಗಿದೆ. ಮೋದಿ ಸರ್ಕಾರ ಯುಪಿಐ ಅನ್ನು ಕಲೆಕ್ಷನ್ ಮಷಿನ್ ಆಗಿ ಮಾಡ್ತಿದೆ ಎಂದವರು ವಾಗ್ದಾಳಿ ನಡೆಸಿದ್ದಾರೆ.
ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡುವಂತೆ ರಾಜ್ಯ ಸರ್ಕಾರದ ಆದೇಶ ವಿಚಾರವಾಗಿಯೂ ಪ್ರತಿಕ್ರಿಯಿಸಿರುವ ಅವರು, ಕೇಂದ್ರದ ಗೈಡ್ಲೈನ್ಸ್ಗೆ ಬದ್ಧವಾಗಿ ನಮ್ಮ ಸರ್ಕಾರ ನಿರ್ಧರಿಸಿದೆ. ಸರ್ಕಾರ ವಂದೇ ಮಾತರಂಗೆ ಗೌರವ ನೀಡುವ ಕೆಲಸ ಮಾಡಿದೆ. ರಾಷ್ಟ್ರಪತಿ, ರಾಜ್ಯಪಾಲರು, ಪ್ರಧಾನಿ ಬಂದಾಗ ಪೂರ್ಣ ಗೀತೆ ಹಾಡಲಾಗುತ್ತೆ. ವಂದೇ ಮಾತರಂ ಹಾಡುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದವರು ತಿಳಿಸಿದ್ದಾರೆ.