ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

ಸದ್ಯದ ಸರ್ಕಾರದಲ್ಲಿ ತಮ್ಮ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ? ಅಂತ ತಮಗೆ ಮಾತ್ರ ಗೊತ್ತಿದೆ ಎಂದು ಹೇಳುವ ಮೂಲಕ ತಮ್ಮ ಸಲಹೆಗಳಿಗೆ ಮನ್ನಣೆ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ನಾನೀಗ ಮುಖ್ಯಮಂತ್ರಿ ಅಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ವಿಧಾನಸೌಧದ ಸಿಎಲ್‌ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ನಾನೀಗ ಮುಖ್ಯಮಂತ್ರಿ ಅಲ್ಲ. ನನ್ನ ಮಾತು ಈಗಲೂ ನಡೆಯುತ್ತೆ ಅಂತ ಬಹಳ ಜನ ಅಂದುಕೊಂಡಿದ್ದಾರೆ. ನಾನೂ ಹಾಗೇ ಅಂದುಕೊಂಡಿದ್ದೆ. ಆದರೆ ನನ್ನ ಮಾತು ಎಷ್ಟು ನಡೆಯುತ್ತೆ, ಎಷ್ಟು ನಡೆಯಲ್ಲ ಅಂತ ನನಗೆ ಮಾತ್ರ ಗೊತ್ತು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಎಐಸಿಸಿ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಮಾರ್ಮಿಕ ಮಾತುಗಳನ್ನಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

Siddaramaiah
ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಪಾಲಿಕೆ ಅಧಿಕಾರಿಗಳಿಂದ ತೆರವು!

ಸದ್ಯದ ಸರ್ಕಾರದಲ್ಲಿ ತಮ್ಮ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ? ಅಂತ ತಮಗೆ ಮಾತ್ರ ಗೊತ್ತಿದೆ ಎಂದು ಹೇಳುವ ಮೂಲಕ ತಮ್ಮ ಸಲಹೆಗಳಿಗೆ ಮನ್ನಣೆ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಇದೇ ವೇಳೆ ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದ ವಿರೋಧಿಗಳಿಂದ ಸಂವಿಧಾನ ಶ್ರೇಷ್ಠವಾಗಲ್ಲ. ಸ್ವಾತಂತ್ರ‍್ಯ ಬಂದು 80 ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಪ್ರಜಾಪ್ರಭುತ್ವ ಧ್ವಂಸ ಮಾಡೋರ ಜೊತೆಗೆ ಹೋಗಬಾರದು, ಮನುವಾದಿಗಳಿಂದ ಬದಲಾವಣೆ ಆಗೋದಿಲ್ಲ. ಮನುವಾದಿಗಳ ಜೊತೆ ನೀವು ಹೋದ್ರೆ ನಿಮಗೆ ಒಂದು ಸ್ಥಾನಮಾನ ಸಿಗಬಹುದು, ಆದ್ರೆ ಸಮಾಜದಲ್ಲಿ ಬದಲಾವಣೆ ಆಗಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಜೀವಂತ ಇದೆ. ನಾವು ಶೂದ್ರ ವರ್ಗದ ಜನ, ಬದಲಾವಣೆಯ ದಾರಿಯಲ್ಲಿ ನಡೆಯಬೇಕು ಎಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com