ಉಮರ್ ಖಾಲಿದ್​​ರನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು: ಬಿ ಕೆ ಹರಿಪ್ರಸಾದ್

ಬಿಜೆಪಿ ಮತ್ತು ಎಬಿವಿಪಿ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ ಕೂಡ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
Umar Khalid
ಉಮರ್ ಖಾಲಿದ್
Updated on

ಬೆಂಗಳೂರು: ಎನ್‌ಎಲ್‌ಎಸ್‌ಐಯುನಲ್ಲಿ ಉಮರ್ ಖಾಲಿದ್ ಕುರಿತ ಡಾಕ್ಯುಮೆಂಟರಿ ಪ್ರದರ್ಶನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಉಮರ್ ಖಾಲಿದ್ ಒಬ್ಬ ‘ದೇಶಪ್ರೇಮಿ’ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಬಣ್ಣಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಬಿಜೆಪಿ ಮತ್ತು ಎಬಿವಿಪಿ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ ಕೂಡ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ದೇಶದ ಜನರ ಪರವಾಗಿ ಮಾತನಾಡಿದ ವಿದ್ಯಾವಂತ, ಜನಪರ ಚಳವಳಿಗಾರ ಉಮರ್ ಖಾಲಿದ್​​ರನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು ಎಂದು ಆರೋಪಿಸಿದ್ದಾರೆ.

Umar Khalid
'ಕಾಂಗ್ರೆಸ್ ನ ಬೌದ್ಧಿಕ ದಿವಾಳಿತನ': ಉಮರ್ ಖಾಲಿದ್ ರಾಷ್ಟ್ರವಾದಿ ಹೇಳಿಕೆಗೆ ಬಿಜೆಪಿ, ABVP ತಿರುಗೇಟು; Video

ಉಮರ್ ಖಾಲಿದ್ ಆರ್ ಎಸ್ ಎಸ್ ನಂತೆ ಪಾಕಿಸ್ತಾನದ ಜೊತೆ ಗುಪ್ತ ಚರ್ಚೆ ನಡೆಸಿಲ್ಲ. ಸಂಘ ಪರಿವಾರದವರಂತೆ ಐಎಸ್ಐ ಏಜೆಂಟ್​​ಗಳ ಜೊತೆ ಮಾತುಕತೆಯನ್ನೂ ನಡೆಸಿಲ್ಲ. ಕನಿಷ್ಟ ಪಕ್ಷ ಆಮಂತ್ರಣವೇ ಇಲ್ಲದೆ ಪಾಕ್ ಪ್ರಧಾನಿಯ ಕುಟುಂಬದ ಕಾರ್ಯಕ್ರಮಕ್ಕೆ ಹೋಗಿ ಬಿರಿಯಾನಿ ತಿಂದಿಲ್ಲ ಎಂದವರು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜಕೀಯವಾಗಿ ಉತ್ತರ ಕೊಡಬೇಕಾದ ಪ್ರಶ್ನೆಗಳಿಗೆ ‘ದೇಶದ್ರೋಹ’ ಎಂಬ ಪದವನ್ನು ಬಳಸುತ್ತಿದ್ದಾರೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪ್ರತಿಯೊಬ್ಬರನ್ನೂ ದೇಶದ್ರೋಹಿ ಎಂದು ಕರೆಯುವುದು ಪ್ರಜಾಪ್ರಭುತ್ವದ ಭಾಷೆಯಲ್ಲ ಎಂದವರು ಕಿಡಿ ಕಾರಿದ್ದಾರೆ.

‘ವಿಜಯೇಂದ್ರ ಕೆಪಿಸಿಸಿಯ ವಾಚ್ ಮೆನ್ ಆಗಿದ್ದಾರೆಯೇ?’

ಕಾಂಗ್ರೆಸ್ ಪಕ್ಷದ ಮನೆ ಮೂರು ಬಾಗಿಲು ಎಂದು ಹೇಳುವ ವಿಜಯೇಂದ್ರ ಮೊದಲು ತಮ್ಮ ಮನೆಯ ಬಾಗಿಲುಗಳನ್ನು ಎಣಿಸಿಕೊಳ್ಳಲಿ. ಕಾಂಗ್ರೆಸ್ ಮನೆಗೆ ಮೂರು ಬಾಗಿಲುಗಳಿವೆ ಎಂದು ಹೇಳುವ ಬಿಜೆಪಿಯ ಮನೆ ಈಗ ‘ನೂರು ಬಾಗಿಲು’ ಆಗಿದೆ. ಇಷ್ಟಕ್ಕೂ ಕಾಂಗ್ರೆಸ್ ಪಕ್ಷದ ಕಚೇರಿಯ ಬಾಗಿಲು, ಕಿಟಕಿಗಳನ್ನು ಎಣಿಸುತ್ತಾ ಕೂರಲು ವಿಜಯೇಂದ್ರ ಕೆಪಿಸಿಸಿಯ ವಾಚ್ ಮೆನ್ ಆಗಿದ್ದಾರೆಯೇ ಎಂದು ಕೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com