ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ಎರಡೂ ಕಾರ್ಯಕ್ರಮಗಳು ಕುರುಬ ಸಮುದಾಯಕ್ಕೆ ಸಂಬಂಧಿಸಿದ್ದಾಗಿದ್ದು, ಸಮುದಾಯದ ಮೇಲೆ ಸಿದ್ದರಾಮಯ್ಯ ಅವರ ಪ್ರಭಾವವನ್ನು ಮತ್ತೊಮ್ಮೆ ಎತ್ತಿ ತೋರಿಸಿದವು.
K N Rajanna and Siddaramaih
ಕೆ ಎನ್ ರಾಜಣ್ಣ, ಸಿದ್ದರಾಮಯ್ಯ
Updated on

ತುಮಕೂರು: ಒಂದು ಕಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಬ್ಯುಸಿಯಾಗಿದ್ದರೆ, ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನಲ್ಲಿ ಮಾಜಿ ಸಚಿವ, ತಮ್ಮ ಆಪ್ತ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಭೋಜನಕೂಟದಲ್ಲಿ ಭಾಗಿಯಾಗಿದ್ದು, ಇದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಸಿದ್ದರಾಮಯ್ಯ ಅವರು ಕಲಾವಿದ ದಿವಂಗತ ಪಿ.ಆರ್. ತಿಪ್ಪೇಸ್ವಾಮಿ ಅವರ ಸಾಹಿತ್ಯ ಕೃತಿಗಳ ಕುರಿತು ಹೊರತರಲಾದ ಪುಸ್ತಕ ಬಿಡುಗಡೆ ಹಾಗೂ ಖಾಸಗಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತುಮಕೂರಿಗೆ ಆಗಮಿಸಿದ್ದರು.

ಎರಡೂ ಕಾರ್ಯಕ್ರಮಗಳು ಕುರುಬ ಸಮುದಾಯಕ್ಕೆ ಸಂಬಂಧಿಸಿದ್ದಾಗಿದ್ದು, ಸಮುದಾಯದ ಮೇಲೆ ಸಿದ್ದರಾಮಯ್ಯ ಅವರ ಪ್ರಭಾವವನ್ನು ಮತ್ತೊಮ್ಮೆ ಎತ್ತಿ ತೋರಿಸಿದವು.

ಕಾಂಗ್ರೆಸ್‌ ನಾಯಕತ್ವ ಮತ್ತು ಡಿ.ಕೆ. ಶಿವಕುಮಾರ್‌ ಅವರ ಮುಖ್ಯಮಂತ್ರಿ ಸ್ಥಾನದ ಮಹತ್ವಾಕಾಂಕ್ಷೆಯ ಕುರಿತು ರಾಜಣ್ಣ ಹಾಗೂ ಸಿದ್ದರಾಮಯ್ಯ ನೀಡುತ್ತಿರುವ ಸರಣಿ ಹೇಳಿಕೆಗಳ ನಡುವೆಯೇ ಈ ಭೇಟಿ ನಡೆದಿದೆ.

ಭೇಟಿಗೂ ಕೆಲ ಗಂಟೆಗಳ ಮುನ್ನ ಮಾತನಾಡಿದ್ದ ರಾಜಣ್ಣ, “ಸಿದ್ದರಾಮಯ್ಯ ಅವರು ಪ್ರಶ್ನಾತೀತ ನಾಯಕರು. ಅವರು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅವರು ಸಕ್ರಿಯವಾಗಿಯೇ ಇರುತ್ತಾರೆ. ರಾಜಕೀಯದಲ್ಲಿ ಏಳು-ಬೀಳು ಸಹಜ” ಎಂದು ಹೇಳಿದ್ದರು.

ಗುರುವಾರ ರಾಜಣ್ಣ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಬೆಂಬಲ ನೀಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಬಳಿಕ ತಮ್ಮ ಹೇಳಿಕೆಯನ್ನು ತಿದ್ದಿಕೊಂಡ ಅವರು, ಒಕ್ಕಲಿಗರು ಡಿ.ಕೆ. ಶಿವಕುಮಾರ್‌ ಅವರಿಗೆ ಮತ ಹಾಕುತ್ತಾರೆ. “ಅದಕ್ಕಾಗಿಯೇ ಕಾಂಗ್ರೆಸ್‌ ಅವರನ್ನು ಮುಖ್ಯಮಂತ್ರಿ ಮಾಡಿದೆ” ಎಂದು ಹೇಳಿದ್ದರು.

K N Rajanna and Siddaramaih
ಸಿದ್ದು ಬಲಿಷ್ಠರಾಗಿದ್ದರೆ ಕಾಂಗ್ರೆಸ್‌ ಬಲಿಷ್ಠ; ಒಕ್ಕಲಿಗರೆಲ್ಲ ಶಿವಕುಮಾರ್ ನೋಡಿ ವೋಟ್ ಹಾಕ್ತಾರಾ?: ಕೆ.ಎನ್ ರಾಜಣ್ಣ; Video

ರಾಜಣ್ಣ ಅವರ ಈ ಹೇಳಿಕೆಗೆ ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ತೀವ್ರ ಪ್ರತಿಕ್ರಿಯೆ ನೀಡಿದ್ದರು.

ರಾಜಣ್ಣ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಅಶೋಕ್‌, ಒಕ್ಕಲಿಗರು ಶಿವಕುಮಾರ್‌ ಅವರ ಮುಖ ನೋಡಿ ಮತ ಹಾಕುವುದಿಲ್ಲ, ಒಂದು ವೇಳೆ ಹಾಕಿದರೂ ಅದು ಶೇ.5ರಷ್ಟು ಮಾತ್ರ ಇರಬಹುದು ಎಂದು ರಾಜಣ್ಣ ಅವರೇ ಹೇಳಿದ್ದಾರೆ” ಎಂದಿದ್ದರು.

ಅವರು ‘ನಾನು 2028ರಲ್ಲಿ ಬರುತ್ತೇನೆ’ ಎನ್ನುತ್ತಾರೆ. ಎಲ್ಲಿಂದ ಬರುತ್ತೀರಿ? ನಿಮ್ಮದೇ ಪಕ್ಷದ ನಾಯಕರು ನಿಮ್ಮನ್ನು ನೋಡಿ ಯಾರೂ ಮತ ಹಾಕುವುದಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ಈ ನಡುವೆ, ರಾಜಣ್ಣ ಅವರೊಂದಿಗೆ ನಡೆದ ಔತಣಕೂಟದ ಭೇಟಿಗೆ ರಾಜಕೀಯ ಅರ್ಥ ಕಲ್ಪಿಸುವುದನ್ನು ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.

ನಾನು ಮಾಧ್ಯಮದವರೊಂದಿಗೆ ಮಾತನಾಡುವುದಿಲ್ಲ. ರಾಜಣ್ಣ ಅವರು ಊಟದ ಎಲ್ಲ ವ್ಯವಸ್ಥೆ ಮಾಡಿದ್ದರು. ನಾನು ಮಾಂಸಾಹಾರ ಮತ್ತು ಸಸ್ಯಾಹಾರ ಎರಡನ್ನೂ ಸೇವಿಸಿದೆ. ಸಸ್ಯಾಹಾರ ಸ್ವಲ್ಪ ಹೆಚ್ಚೇ ತಿಂದೆ. ನಾವು ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ” ಎಂದು ಸ್ಪಷ್ಟಪಡಿಸಿದರು.

ಏತನ್ಮಧ್ಯೆ ಕಾಂಗ್ರೆಸ್‌ನೊಳಗಿನ ಸಿದ್ದರಾಮಯ್ಯ ಅವರ ಬದಲಾಗುತ್ತಿರುವ ರಾಜಕೀಯ ಸಮೀಕರಣಗಳ ನಡುವೆ ರಾಜಣ್ಣ ಅವರೊಂದಿಗಿನ ಅವರ ನಂಟು ಮತ್ತೆ ಗಮನ ಸೆಳೆದಿದೆ.

ಸಿದ್ದರಾಮಯ್ಯ ಅವರ ಹಿಂದಿನ ಅಹಿಂದಾ ಸಹವರ್ತಿಗಳ ಪೈಕಿ ರಾಜಣ್ಣ ಅವರು ಸಿದ್ದರಾಮಯ್ಯ ಪರವಾಗಿ ನಿರಂತರವಾಗಿ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸುತ್ತಿರುವುದು ಎದ್ದು ಕಾಣಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com