ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ? ಸತ್ಯಾಂಶವನ್ನು ದೇಶದ ಮುಂದೆ ಬಹಿರಂಗಪಡಿಸಿ: ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಆಗ್ರಹ

ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ತನ್ನ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲು ಆಯೋಗದೊಳಗಿನ ಭಿನ್ನಾಭಿಪ್ರಾಯಕ್ಕೆ ಕಾರಣವನ್ನು ಅದು ಸ್ವತಃ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.
Union Minister HD Kumaraswamy asks Election Commission to place facts to protect dignity
ಕುಮಾರಸ್ವಾಮಿ
Updated on: 

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು, ರಾಜಕೀಯ ಲಾಭಕ್ಕಾಗಿ ಸಾಂವಿಧಾನಿಕ ಸಂಸ್ಥೆಯೊಂದರ ಘನತೆಯನ್ನು ಕುಂದಿಸುವ ಕೆಲಸ ಮಾಡುತ್ತಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ ಬಂದಿದೆ? ಆ ಕುರಿತ ವರದಿಗಳ ಹಿಂದಿನ ಸತ್ಯಾಂಶವನ್ನು ಸಾರ್ವಜನಿಕರ ಮುಂದಿಡುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23 ರಂದು ನಡೆಯಲಿರುವ ಚುನಾವಣೆ ಕುರಿತು ಚರ್ಚಿಸಲು ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿಯ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ? ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

Union Minister HD Kumaraswamy asks Election Commission to place facts to protect dignity
'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ': ಪ್ರತಿಪಕ್ಷಗಳಿಗೆ CJP ಅಭಿಜೀತ್ ದೀಪ್ಕೆ ಆಗ್ರಹ

ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದಿಂದ ಸ್ಪಷ್ಟ ವಿವರಣೆ ಬರುವವರೆಗೆ ಕಾಯದೆ ಅದನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್ ಕ್ರಮವನ್ನು ಕುಮಾರಸ್ವಾಮಿ ಟೀಕಿಸಿದರು. ಇಂತಹ ಪ್ರತಿಭಟನೆಗಳು ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಬಹುದು ಎಂದು ಅವರು ಹೇಳಿದರು.

ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ತನ್ನ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲು ಆಯೋಗದೊಳಗಿನ ಭಿನ್ನಾಭಿಪ್ರಾಯಕ್ಕೆ ಕಾರಣವನ್ನು ಅದು ಸ್ವತಃ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.

"ಭಿನ್ನಾಭಿಪ್ರಾಯಗಳು ಏನೇ ಇರಲಿ, ಚುನಾವಣಾ ಆಯೋಗವು ಸತ್ಯವೇನೆಂದು ಜನರಿಗೆ ತಿಳಿಸಬೇಕು ಮತ್ತು ಸಂಸ್ಥೆಯ ಘನತೆಯನ್ನು ಎತ್ತಿಹಿಡಿಯಬೇಕು," ಎಂದು ಕುಮಾರಸ್ವಾಮಿ ಹೇಳಿದರು.

ಚುನಾವಣಾ ಆಯೋಗ ಒಂದು ಜವಾಬ್ದಾರಿಯುತ ಸಂಸ್ಥೆ. ಕಳೆದ 78 ವರ್ಷಗಳಿಂದ ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದುಕೊಂಡು ಬಂದಿದ್ದರೆ ಅದು ಚುನಾವಣಾ ಆಯೋಗದ ಜವಾಬ್ದಾರಿಯಿಂದಲೇ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ನಡುವೆ ಇರುವ ಅಭಿಪ್ರಾಯ, ಭೇದದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಇಟ್ಟುಕೊಂಡು ಅದನ್ನೇ ದೊಡ್ಡ ಅಪರಾಧದಂತೆ ಬಿಂಬಿಸಿ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ಏನೇನು ಮಾಡಿದ್ದಾರೆ ಎಂದು ನಾನು ಚರ್ಚೆ ಮಾಡುವುದಿಲ್ಲ. ಆದರೆ, ಈ ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ ಬಂದಿದೆ, ಸತ್ಯಾಸತ್ಯತೆ ಏನು ಎಂಬುದನ್ನು ಆಯೋಗವೇ ದೇಶದ ಜನತೆಯ ಮುಂದೆ ಹೇಳಬೇಕು ಮತ್ತು ತನ್ನ ಸಂಸ್ಥೆಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ನಿರಂತರವಾಗಿ ರಾಷ್ಟ್ರದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಲೇ ಇದೆ. ಅವುಗಳ ಚಾರಿತ್ರ್ಯವಧೆ ಮಾಡುವುದಲ್ಲದೇ ತನ್ನ ವೈಫಲ್ಯಗಳನ್ನು ಆ ಸಂಸ್ಥೆಗಳ ಮೇಲೆ ಹೇರುವ ಪ್ರಯತ್ನ ಮಾಡಿಕೊಂಡೇ ಬರುತ್ತಿದೆ. ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ನಡೆಸುತ್ತಿರುವ ದಾಳಿ ಇದೇ ಮೊದಲಲ್ಲ. ರಾಹುಲ್ ಗಾಂಧಿಯವರು ಜನತೆಯ ದಿಕ್ಕು ತಪ್ಪಿಸಲು ಆಗಾಗ ಇಂತಹ ಕೆಲಸಗಳಿಗೆ ಕುಮ್ಮಕ್ಕು ಕೊಡುತ್ತಾರೆ ಎಂದು ಕುಮಾರಸ್ವಾಮಿ ನೇರವಾಗಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com