ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ: KPCC ಅಧ್ಯಕ್ಷರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು.
Siddaramaiah, BK Hariprasad
ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್
Updated on

ಬೆಂಗಳೂರು: KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು. ಬಳಿಕ ಸಂಘಟನೆ ಕುರಿತಂತೆ ಪಕ್ಷದ ಹಿರಿಯ ನಾಯಕರು ಮಾತನಾಡಿದರು. ಇನ್ನು CWC ಸದಸ್ಯತ್ವ, ಮಾಜಿ ಸಿಎಂ ಸಿದ್ದರಾಮಯ್ಯಗೆ ಮಾತನಾಡಲು ಕೊನೆಯದಾಗಿ ಅವಕಾಶ ನೀಡಿದ್ದು ಅವರಿಗೆ ಬೇಸರ ತರಿಸಿತ್ತು. ಇದನ್ನು ತಮ್ಮ ಭಾಷಣ ವೇಳೆ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿದರು.

ನಾನು ಈ ರಾಜ್ಯದ ವಿರೋಧ ಪಕ್ಷದ ನಾಯಕನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದೇ. ಪ್ರಣಾಳಿಕೆಯಲ್ಲಿ ಕೊಟ್ಟಿರುವಂತಹ ಭರವಸೆಗಳನ್ನು ಈಡೇರಿಸುವಂತ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದರು.

Siddaramaiah, BK Hariprasad
ಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ

ಭಾರತ ಅನೇಕ ಜಾತಿ-ಧರ್ಮ, ಸಂಸ್ಕೃತಿಯಿಂದ ಕೂಡಿದೆ. ಈ ದೇಶದಲ್ಲಿ ನಾವು ಬಹುತ್ವವನ್ನು ಕಾಪಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿಗರು ಧರ್ಮದ ಹೆಸರಿನಲ್ಲಿ , ಜಾತಿಯ ಹೆಸರಿನಲ್ಲಿ ಹಾಗೂ ಸಂಸ್ಕೃತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ಎಂದಿಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಿಡಬಾರದು ಎಂದು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com