Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
2 JeM terrorists killed in ongoing Encounter in Pulwama

ಯೋಧರ ಹತ್ಯೆ ಬೆನ್ನಲ್ಲೇ ಪುಲ್ವಾಮದಲ್ಲಿ ಇಬ್ಬರು ಜೆಇಎಮ್ ಉಗ್ರರ ಹತ್ಯೆ!

Amid Indo-Pak tension, ICJ to hold public hearings in Kulbhushan Jadhav case from today

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ ಇಂದಿನಿಂದ ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆ

AnanthKumar Hegde

ಮುಸ್ಲಿಮರ ಬಗ್ಗೆ ಮಾತನಾಡಿದರೆ ಜೀವ ತೆಗೆಯುತ್ತೇವೆ: ಕೇಂದ್ರ ಸಚಿವ ಹೆಗಡೆಗೆ ಜೀವ ಬೆದರಿಕೆ ಕರೆ

Kamal hassan and M.k Stalin

ನಾನು ಹರಿದ ಅಂಗಿ ಧರಿಸಿ ನೌಟಂಕಿ ರಾಜಕಾರಣ ಮಾಡುವುದಿಲ್ಲ: ಸ್ಟಾಲಿನ್ ಗೆ ಕಮಲ್ ಹಾಸನ್ ಟಾಂಗ್

Assam CM Sarbananda Sonowal likens Pulwama incident to

ಭಾರತದ ಮೇಲೆ ಮೊಘಲರ ದಾಳಿ ಇನ್ನೂ ನಿಂತಿಲ್ಲ, ಪುಲ್ವಾಮ ದಾಳಿ ಇದಕ್ಕೊಂದು ಉದಾಹರಣೆ: ಅಸ್ಸಾಂ ಸಿಎಂ

Fact Check: Not CCTV clip of Pulwama Terror Attack, old footage from Iraq being pushed on social media

'ಫೇಕ್ ನ್ಯೂಸ್' ಅಬ್ಬರ: ಪುಲ್ವಾಮ ದಾಳಿ ವಿಡಿಯೋ ಅಲ್ಲ, ಇರಾನ್ ನ ವಿಡಿಯೋ!

Devotees take a dip at the on-going Kumbh Mela

ಟಿ ನರಸೀಪುರ: ತ್ರಿವೇಣಿ ಸಂಗಮದ ಕುಂಭಮೇಳ; ಮೊದಲ ದಿನವೇ ಸಾವಿರಾರು ಭಕ್ತರ ಆಗಮನ

M.B patil

'ಭಗವಾನ್, ಪ್ರತಾಪ್ ಸಿಂಹ ಅನಂತ್ ಕುಮಾರ್ ಹೆಗಡೆ' ನಿಮ್ಮ ನಾಲಗೆ ನಿಯಂತ್ರಣದಲ್ಲಿರಲಿ: ಪಾಟೀಲ್ ವಾರ್ನಿಂಗ್

Won

ಅಸ್ಸಾಂ ಮತ್ತೊಂದು ಕಾಶ್ಮೀರವಾಗಲು ಬಿಡುವುದಿಲ್ಲ: ಅಮಿತ್ ಶಾ

RahulGandhi

ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್

Siddaramiah

ಕುಮಾರಸ್ವಾಮಿ ಸಿಲುಕಿಸಲು ಎಸ್‌ಐಟಿ ತನಿಖೆಗೆ ಸಿದ್ದರಾಮಯ್ಯ ಒತ್ತಾಯ: ಬಿಜೆಪಿ ಆರೋಪಕ್ಕೆ 'ಸಿದ್ದು' ತಿರುಗೇಟು

ChrisGayle

ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರೀಸ್ ಗೇಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ!

Casual Photo

ಪ್ರೇಮಿಗಳ ದಿನ ಬ್ಯಾಗ್ ನಲ್ಲಿದ್ದ ಪ್ರೇಮಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ

ಮುಖಪುಟ >> ರಾಜಕೀಯ

ಹೆಬ್ಬಾಳ್ಕರ್-ಜಾರಕಿಹೊಳಿ ಸಮಸ್ಯೆ ಇತ್ಯರ್ಥವಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸುದ್ದಿಗೋಷ್ಠಿ

ಸ್ಥಳೀಯ ಮುಖಂಡರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಂಡಿದ್ದೇವೆ: ಸತೀಶ್ ಜಾರಕಿಹೊಳಿ
Hebbalkar-Jarkiholi Problem Resolved says KPCC working president Eshwar Khandre

ಸಂಗ್ರಹ ಚಿತ್ರ

ಬೆಳಗಾವಿ: ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ ಶಮನವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ವಾಕ್ಸಮರದಿಂದ ಕದನ ಕುತೂಹಲ ಮೂಡಿಸಿದ್ದ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಹೆಬ್ಬಾಳ್ಕರ್ ಬಣದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೂ ಲಕ್ಷ್ಮೀ ಬಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಂಧಾನದ ಬಳಿಕ ಜಾರಕಿಹೊಳಿ ಬೆಂಬಲಿಗರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಲಕ್ಷ್ಮೀ ಬಣ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ.

ಆಯ್ಕೆ ಪ್ರಕ್ರಿಯೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು. ಬೆಳಗಾವಿಯ ಸರ್ಕೀಟ್ ಹೌಸ್ ನಲ್ಲಿ ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಹೆಬ್ಬಾಳ್ಕರ್-ಜಾರಕಿಹೊಳಿ ಸಮಸ್ಯೆ ಇತ್ಯರ್ಥವಾಗಿದೆ. ಸೌಹಾರ್ದತೆಯಿಂದ ಎಲ್ಲವೂ ಬಗೆಹರಿದಿದೆ.

ಭಿನ್ನಾಭಿಪ್ರಾಯದಿಂದ ಚುನಾವಣೆ ಮುಂದೂಡಿಕೆಯಾಗಿತ್ತು. ವರಿಷ್ಠರ ಸೂಚನೆಯಂತೆ ಸಮಸ್ಯೆ ಬಗೆಹರಿದಿದೆ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರನ್ನೂ ಬಿಟ್ಟು ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಖಂಡ್ರೆ ಹೇಳಿದರು.

ಅಂತೆಯೇ ಇಲ್ಲಿ ಯಾವುದೇ ಬಣ ರಾಜಕೀಯವಿಲ್ಲ. ಕಾಂಗ್ರೆಸ್ ಒಟ್ಟಾಗಿದ್ದು, ಕೇವಲ ಸಂವಹನ ಕೊರತೆಯಿಂದಾಗಿ ಸಮಸ್ಯೆ ಉಂಟಾಗಿತ್ತು. ಇದೀಗ ಪರಸ್ಪರ ಕುಳಿತು ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಂಡಿದ್ದೇವೆ ಎಂದು ಖಂಡ್ರೆ ಹೇಳಿದರು.

ವೈಯುಕ್ತಿಕ ಟೀಕೆಗಳಿಗೆ ಉತ್ತರಿಸಲ್ಲ, ಭಗವಂತ ನೋಡಿಕೊಳ್ಳುತ್ತಾನೆ: ಲಕ್ಷ್ನೀ ಹೆಬ್ಬಾಳ್ಕರ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ, ಖಂಡ್ರೆ ನೇತೃತ್ವದಲ್ಲಿ ಸಮಸ್ಯೆ ಬಗೆಹರಿದಿದೆ. ಪಕ್ಷದ ಹಿತದೃಷ್ಟಿಯಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಬಣವಿಲ್ಲ, ಕಾಂಗ್ರೆಸ್ ಪಕ್ಷದ ಹಿತ ಮುಖ್ಯವಾಗಿದ್ದು, ಲೋಕಸಭೆ ಚುನಾವಣೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಲಿದ್ದೇವೆ ಎಂದರು.

ಬಳಿಕ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿವಾದ ಸುಖಾಂತ್ಯ ಸಂತಸ ತಂದಿದೆ. ಅವಿರೋಧವಾಗಿ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವೈಯುಕ್ತಿಕ ಟೀಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ಹೇಳಿದರು.
ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Jarkiholi Brothers-Hebbalkar, Belagavi, Congress, PLD Bank Election, Lakshmi Hebbalkar, Jarkiholi Brothers, Eshwar Khandre, ಬೆಳಗಾವಿ, ಕಾಂಗ್ರೆಸ್, ಪಿಎಲ್ ಡಿ ಬ್ಯಾಂಕ್ ಚುನಾವಣೆ, ಲಕ್ಷ್ಮೀ ಹೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS