ವಿಶೇಷ ಸಾರಿಗೆ ವ್ಯವಸ್ಥೆ, ಉಚಿತ ಪ್ರಯಾಣ

81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರ ಅನುಕೂಲಕ್ಕಾಗಿ ಕರ್ನಾಟಕ..
81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ (ಸಂಗ್ರಹ ಚಿತ್ರ)
81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ (ಸಂಗ್ರಹ ಚಿತ್ರ)

ಹಾಸನ: 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ.

ಹಾಸನ ವಿಭಾಗದ 40 ಬಸ್‍ಗಳನ್ನು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೀಡಲಾಗಿದೆ. ಈ ಪೈಕಿ 10 ಬಸ್‍ಗಳು ಹಾಸನದಿಂದ ಶ್ರವಣಬೆಳಗೊಳಕ್ಕೆ ನೇರವಾಗಿ ಸಂಚರಿಸಲಿವೆ. ಇನ್ನುಳಿದ 30 ಸಾರಿಗೆ ಬಸ್‍ಗಳನ್ನು ನಾನಾ ಮಾರ್ಗಗಳ ಮೂಲಕ ಶ್ರವಣಬೆಳಗೊಳಕ್ಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಬಸ್‍ಗಳಿಗೆ ಮಾರ್ಗಗಳನ್ನು ಸೂಚಿಸಲಾಗಿದೆ.

ಇದಲ್ಲದೆ ಇತರೆ ತಾಲೂಕುಗಳಲ್ಲಿ ಇರುವ ಸಾಹಿತ್ಯಾಭಿಮಾನಿಗಳಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳ ಡಿಪೋಗಳಿಂದ ತಲಾ 5 ಬಸ್‍ಗಳನ್ನು ಸಾಹಿತ್ಯ ಸಮ್ಮೇಳನ ನಡೆಯುವ ಶ್ರವಣಬೆಳಗೊಳಕ್ಕೆ ಸೌಕರ್ಯ ಕಲ್ಪಿಸಲಾಗಿದೆ. ಚನ್ನರಾಯಪಟ್ಟಣ ಹಾಗೂ ಹಿರೇಸಾವೆಯಿಂದ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲಾಗಿದೆ.

ಉಚಿತ ಪ್ರಯಾಣ
ಶ್ರವಣಬೆಳಗೊಳ ಬಸ್ ನಿಲ್ದಾಣದಿಂದ ಸಾಹಿತ್ಯ ಸಮ್ಮೇಳನದ ವೇದಿಕೆಯವರೆಗೆ ಸಂಚರಿಸುವ ಬಸ್‍ಗಳಲ್ಲಿ ಪ್ರಯಾಣ ಉಚಿತ. ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮುಂಗಡವಾಗಿ ಹಣ ನೀಡಲಾಗಿದೆ. ಜಿಲ್ಲೆಯಲ್ಲದೇ ಹೊರ ಜಿಲ್ಲೆಗಳಿಂದ ಶ್ರವಣಬೆಳಗೊಳಕ್ಕೆ ಆಗಮಿಸುವಂತಹ ಜನರ ಅನುಕೂಲಕ್ಕಾಗಿ ಶ್ರವಣಬೆಳಗೊಳ ಬಸ್ ನಿಲ್ದಾಣದಿಂದ ಸಮ್ಮೇಳನ ನಡೆಸುವಂತಹ ಸ್ಥಳಕ್ಕೆ ಜನರು ಹೋಗಲು ಪ್ರತ್ಯೇಕವಾಗಿ ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com