ಪರಮಾಣು ಸಾಮರ್ಥ್ಯದ ಅಗ್ನಿ-4 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಪರಮಾಣು ಸಿಡಿ ತಲೆಗಳನ್ನು ಹೊತ್ತು ಸುಮಾರು 4000 ಕಿ.ಮೀ ದೂರದ ಗುರಿಯನ್ನು ಕರಾರುವಕ್ಕಾಗಿ...
ಪರಮಾಣು ಸಾಮರ್ಥ್ಯ ಹೊಂದಿರುವ ಅಗ್ನಿ-4 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ.
ಪರಮಾಣು ಸಾಮರ್ಥ್ಯ ಹೊಂದಿರುವ ಅಗ್ನಿ-4 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ.

ಒಡಿಶಾ: ಪರಮಾಣು ಸಿಡಿ ತಲೆಗಳನ್ನು ಹೊತ್ತು ಸುಮಾರು 4000 ಕಿ.ಮೀ ದೂರದ ಗುರಿಯನ್ನು ಕರಾರುವಕ್ಕಾಗಿ ತಲುಪಬಲ್ಲ ಸ್ವದೇಶಿ ನಿರ್ಮಿತ ಅಗ್ನಿ-4 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಮಂಗಳವಾರ ಒಡಿಶಾ ಕರಾವಳಿ ತೀರದಲ್ಲಿ ಯಶಸ್ವಿಯಾಗಿ ನಡೆಯಿತು.

ಪರಮಾಣು ಸಾಮರ್ಥ್ಯ ಹೊಂದಿರುವ ಅಗ್ನಿ-4 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದ್ದು, ಒಡಿಶಾ ರಾಜ್ಯದ ಕರಾವಳಿಯಲ್ಲಿರುವ ಮಿಲಿಟರಿ ಪ್ರದೇಶದಲ್ಲಿ ಪರಮಾಣ ಸಾಮರ್ಥ್ಯ ಹೊತ್ತೊಯ್ಯಬಲ್ಲ ಅಗ್ನಿ-4 ಕ್ಷಿಪಣಿ ಪರೀಕ್ಷಾರ್ಥವನ್ನು ಯಶಸ್ವಿಯಾಗಿ ಉಡಾಯಿಸಲಾಗಿದೆ.

ಉಡಾವಣೆಗೆಂದೇ ವಿಶೇಷವಾಗಿ ಸಿದ್ಧಪಡಿಸಲಾಗಿದ್ದ ಮೊಬೈಲ್ ಲಾಂಚರ್ ವಾಹನದ ಮೂಲಕ ಕ್ಷಿಪಣಿಯನ್ನು ಉಡಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅತ್ಯಾಧುನಿಕ ತಂತ್ರಜ್ಞಾನದಿಂದ ತಯಾರಿಸಲಾಗಿರುವ ಈ ಕ್ಷಿಪಣಿಯು ಸುಮಾರು 4000 ಕಿಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಅಗ್ನಿ-4 ತಂತ್ರಜ್ಞಾನ ಮತ್ತು ಅಣುಶಕ್ತಿ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು, ಅಗ್ನಿ ಸರಣಿಯ ಕ್ಷಿಪಣಿಗಳಲ್ಲೇ ಇದು ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com