ಜಿಎಸ್ ಎಲ್ ವಿ ಮಾರ್ಕ್ 3 ಉಡಾವಣೆಗೆ ಕ್ಷಣಗಣನೆ ಆರಂಭ!

ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಮೈಲಿಗಲ್ಲು ಎಂದೇ ಹೇಳಲಾಗುತ್ತಿರುವ ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಇದೇ ಸೋಮವಾರ ಉಡಾವಣೆ ಮಾಡಲಾಗುತ್ತಿದ್ದು, ಈಗಾಗಲೇ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಜಿಎಸ್ ಎಲ್ ವಿ ಮಾರ್ಕ್ 3
ಜಿಎಸ್ ಎಲ್ ವಿ ಮಾರ್ಕ್ 3

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಮೈಲಿಗಲ್ಲು ಎಂದೇ ಹೇಳಲಾಗುತ್ತಿರುವ ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಇದೇ ಸೋಮವಾರ ಉಡಾವಣೆ ಮಾಡಲಾಗುತ್ತಿದ್ದು, ಈಗಾಗಲೇ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಲ್ಲಿ ಜಿಎಸ್ ಎಲ್ ವಿ ಮಾರ್ಕ್ 3 ಉಡಾವಣೆಗೆ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸೋಮವಾರ ಮಧ್ಯಾಹ್ನ 3.58ಕ್ಕೆ ಈ ಬೃಹತ್ ರಾಕೆಟ್  ಅನ್ನು ನಭಕ್ಕೆ ಹಾರಿಸಲಾಗುತ್ತದೆ. ಮಾನವಸಹಿತ ಬಾಹ್ಯಾಕಾಶ ಯಾನಕ್ಕಾಗಿ ಈ ಬೃಹತ್ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅಭಿವೃದ್ಧಿಪಡಿಸಿದ್ದು, ಇದು ಈ ವರೆಗೆ ಇಸ್ರೋ ಅಭಿವೃದ್ಧಿ ಪಡಿಸಿದ ರಾಕೆಟ್  ಗಳಲ್ಲೇ ಅತ್ಯಂತ ತೂಕದ ಮತ್ತು ಬೃಹತ್ ರಾಕೆಟ್‌ ಎಂಬ ಖ್ಯಾತಿಗೆ ಒಳಗಾಗಿದೆ.

ಭವಿಷ್ಯದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಮಾನವಸಹಿತ ಬಾಹ್ಯಾಕಾಶ ಯಾತ್ರೆಗೂ ಇದೇ ರಾಕೆಟ್‌ ಬಳಕೆಯಾಗಲಿದ್ದು, ಪ್ರಾಯೋಗಿಕವಾಗಿ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಅಂತಿಮ  ಸಿದ್ಧತೆಯಲ್ಲಿ ತೊಡಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com