ಮಾನವ ಸಹಿತ ಬಾಹ್ಯಾಕಾಶ ಪಯಣ ಮತ್ತಷ್ಟು ಸನಿಹ; ಇಸ್ರೋ ಪರೀಕ್ಷೆ ಯಶಸ್ವಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ 'ಮಾನವ ಸಹಿತ ಬಾಹ್ಯಾಕಾಶ ಪಯಣ' ಮತ್ತಷ್ಟು ಸನಿಹವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ 'ಮಾನವ ಸಹಿತ ಬಾಹ್ಯಾಕಾಶ ಪಯಣ' ಮತ್ತಷ್ಟು ಸನಿಹವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ.
ಭವಿಷ್ಯದಲ್ಲಿ ಮಾನವರನ್ನು ಬಾಹ್ಯಕಾಶಕ್ಕೆ ಕಳುಹಿಸುವ ಸಾಮರ್ಥ್ಯ ಬೆಳೆಸಿಕೊಳ್ಳಲು ಮುಂದಾಗಿರುವ ಇಸ್ರೋ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಮಾನವರನ್ನು ಹೊತ್ತ ಕ್ಯಾಪ್ಸೂಲ್‌ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಬಾಹ್ಯಾಕಾಶ ಪಯಣದ ವೇಳೆ ತುರ್ತುಪರಿಸ್ಥಿತಿಯಲ್ಲಿ ತುರ್ತು ನಿರ್ಗಮನ ಮಾಡುವುದು ಹೇಗೆ ಎಂಬ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಲ್ಲಿ ಇಸ್ರೋ ಈ ಪರೀಕ್ಷೆ ಮಾಡಿದ್ದು, ನಿರೀಕ್ಷೆಯಂತೆಯೇ ಕ್ಯಾಪ್ಸುಲ್ ಉಡಾವಣಾ ವಾಹಕದಿಂದ ಬೇರ್ಪಟ್ಟು ಪ್ಯಾರಾಚೂಟ್ ಗಳ ಮೂಲಕ ಸುರಕ್ಷಿತವಾಗಿ ಭೂಮಿಗೆ ಇಳಿದಿದೆ.
ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾದ ಬಳಿಕ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ ಶಿವನ್‌, 'ಸಿಬ್ಬಂದಿ ಹೊತ್ತೊಯ್ಯಬಲ್ಲ ಕ್ಯಾಪ್ಸೂಲ್‌ ಅನ್ನು ರಾಕೆಟ್‌ ಇಂಜಿನ್‌ಗೆ ಜೋಡಣೆ ಮಾಡಿ ಉಡಾವಣೆ ಮಾಡಲಾಯಿತು. ಕೆಲವೇ ಕ್ಷಣಗಳಲ್ಲಿ ರಾಕೆಟ್‌ನಿಂದ ಬೇರ್ಪಟ್ಟ ಕ್ಯಾಪ್ಸೂಲ್‌ ಅನ್ನು ಪ್ಯಾರಾಚೂಟ್‌ ಮೂಲಕ ಸುರಕ್ಷಿತವಾಗಿ ಲ್ಯಾಂಡ್‌ ಮಾಡಿಸಲಾಯಿತು. ಈ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ. 259 ಸೆಕೆಂಡ್‌ಗಳ ಕಾಲ ನಡೆದ ಪರೀಕ್ಷೆಯ ಯಶಸ್ವಿನೊಂದಿಗೆ ಮುಂದಿನ ದಿನಗಳಲ್ಲಿ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಹಾದಿ ಇನ್ನಷ್ಟು ಸುಗಮವಾಗಿದೆ. ಮಿಶನ್‌ ಸಂದರ್ಭ ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ ಕ್ಯಾಪ್ಸೂಲ್ ಒಳಗಿನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ನಿಟ್ಟಿನಲ್ಲಿ ನಡೆಸಿದ ಮೊದಲ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ' ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com