ಭಾರತಕ್ಕೆ ಸೆಡ್ಡು ಹೊಡೆಯಲು ಚೀನಾ ಜತೆ ಸೇರಿ 2022ಕ್ಕೆ ಬಾಹ್ಯಾಕಾಶ ಯಾನಕ್ಕೆ ಪಾಕ್ ಯೋಜನೆ!

ಭಾರತಕ್ಕಿಂತ ತಾವೂ ಏನು ಕಡಿಮೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಶತಾಯ ಗತಾಯ ಪ್ರಯತ್ನಗಳನ್ನು ಮಾಡುತ್ತಿರುವ ಪಾಕಿಸ್ತಾನ ಇದೀಗ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಇಸ್ಲಾಮಾಬಾದ್: ಭಾರತಕ್ಕಿಂತ ತಾವೂ ಏನು ಕಡಿಮೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಶತಾಯ ಗತಾಯ ಪ್ರಯತ್ನಗಳನ್ನು ಮಾಡುತ್ತಿರುವ ಪಾಕಿಸ್ತಾನ ಇದೀಗ ಬಾಹ್ಯಾಕಾಶ ಯಾನ ಯೋಜನೆ ಕೈಗೊಳ್ಳುತ್ತಿರುವುದಾಗಿ ಘೋಷಣೆ ಮಾಡಿದೆ. 
ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಧೆ(ಇಸ್ರೋ) 2022ಕ್ಕೆ ಮಾನವ ಸಹಿತ ಬಾಹ್ಯಾಕಾಶ ಯಾನ ಕೈಗೊಳ್ಳಲು ಭರ್ಜರಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ಪಾಕಿಸ್ತಾನ ಸಹ ಚೀನಾ ಸಹಾಯದೊಂದಿಗೆ 2022ಕ್ಕೆ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆ ಕೈಗೊಳ್ಳುತ್ತಿರುವುದಾಗಿ ಹೇಳಿದೆ. 
ಪಾಕಿಸ್ತಾನ ಮಾಹಿತಿ ಸಚಿವ ಫಹಾದ್ ಚೌಧರಿ ಗುರುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಮೂಲಕ ಭಾರತ ಹಾಗೂ ಪಾಕಿಸ್ತಾನ ಯಾವ ದೇಶ 2022ಕ್ಕೆ ಬಾಹ್ಯಾಕಾಶಕ್ಕೆ ಮಾನವನನ್ನು ಕಳುಹಿಸುತ್ತಾರೆ ಎಂಬ ಸ್ಪರ್ಧೆ ಸದ್ದಿಲ್ಲದೆ ಏರ್ಪಟ್ಟಿದೆ. 
ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾನವ ಸಹಿತ ಬಾಹ್ಯಾಕಾಶ ಯೋಜನೆ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ನವೆಂಬರ್ 3ಕ್ಕೆ ಇಮ್ರಾನ್ ಖಾನ್ ಬೀಜಿಂಗ್ ಭೇಟಿ ನೀಡುತ್ತಿದ್ದು ಈ ಮಹತ್ವದ ಯೋಜನೆಗೆ ಚೀನಾ ಸಹಕರಿಸುವ ಕುರಿತಂತೆ ಚರ್ಚಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com