ಜಿ.ಕೆ. ವಿ. ಕೆಯಲ್ಲಿ ಜನವರಿ 3ರಿಂದ 107ನೇ ಭಾರತೀಯ ವಿಜ್ಞಾನ ಸಮ್ಮೇಳನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಜ.3 ರಿಂದ 7ರ ವರೆಗೆ 107ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿದ್ದು, ಜಗತ್ತಿನ ಪ್ರಮುಖ ವಿಜ್ಞಾನಿಗಳು, ವೈಜ್ಞಾನಿಕ ಕ್ಷೇತ್ರದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಜ.3 ರಿಂದ 7ರ ವರೆಗೆ 107ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿದ್ದು, ಜಗತ್ತಿನ ಪ್ರಮುಖ ವಿಜ್ಞಾನಿಗಳು, ವೈಜ್ಞಾನಿಕ ಕ್ಷೇತ್ರದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನ ಸಮ್ಮೇಳನವು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ‌ ನಡೆಯಲಿದ್ದು, "ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ" ವಿಷಯ ಈ ಸಮ್ಮೇಳನದ ಮುಖ್ಯ ಆಶಯವಾಗಿದೆ. ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಐದು ದಿನಗಳ ಕಾಲ ನಡೆಯಲಿರುವ  ಈ ಕಾರ್ಯಕ್ರಮದಲ್ಲ ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವಥ್ ನಾರಾಯಣ್, ಕೇಂದ್ರ ಸಚಿವ ಡಿ.ವಿ.ಸದಾನಂದ  ಗೌಡ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಮಾತನಾಡಿ, ಭಾರತದಲ್ಲಿ ವಿಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸುವುದು. ದೇಶದಲ್ಲಿ ಸೂಕ್ತ ಸ್ಥಳದಲ್ಲಿ ವಾರ್ಷಿಕ ಸಮ್ಮೇಳನವನ್ನು ಆಯೋಜಿಸುವುದು ಮುಂತಾದ ಧ್ಯೇಯಗಳನ್ನು ಒಳಗೊಂಡಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com