ಚಂದ್ರಯಾನ-2 ಉಡಾವಣೆ: ನಭಕ್ಕೆ ಚಿಮ್ಮಿದ 'ಬಾಹುಬಲಿ'

ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ...

Published: 22nd July 2019 12:00 PM  |   Last Updated: 22nd July 2019 04:27 AM   |  A+A-


Rocket which took Chandrayana 2

ಚಂದ್ರಯಾನ-2 ನೊಕೆ ಹೊತ್ತೊಯ್ದ ರಾಕೆಟ್

Posted By : SUD SUD
Source : ANI
ಶ್ರೀಹರಿಕೋಟ(ಆಂಧ್ರಪ್ರದೇಶ): ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ.

ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎಸ್ಎಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲಾಗಿದೆ. 

ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿದ್ದ ಚಂದ್ರಯಾನ-2 ನೌಕೆಯನ್ನು ಇಂದು ಇಸ್ರೊ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇಸ್ರೋ ವಿಜ್ಞಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. 
Stay up to date on all the latest ವಿಜ್ಞಾನ-ತಂತ್ರಜ್ಞಾನ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp