ವಿಕ್ರಮ್ ಲ್ಯಾಂಡರ್ ಸೆರೆಹಿಡಿದಿರುವ ಫೋಟೋ.
ವಿಕ್ರಮ್ ಲ್ಯಾಂಡರ್ ಸೆರೆಹಿಡಿದಿರುವ ಫೋಟೋ.

ಚಂದ್ರಯಾನ-3: ಚಂದ್ರನ ಮೇಲೆ ಇಳಿಯುವ ಮುನ್ನ ಫೋಟೋ ಕ್ಲಿಕ್ಕಿಸಿದ ವಿಕ್ರಮ್ ಲ್ಯಾಂಡರ್, ಚಂದ್ರನ ಮತ್ತೊಂದು ಮುಖ ಇಲ್ಲಿದೆ ನೋಡಿ...

ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇದಕ್ಕೂ ಮೊದಲೇ ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ.
Published on

ನವದೆಹಲಿ: ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇದಕ್ಕೂ ಮೊದಲೇ ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ.

ವಿಕ್ರಮ್ ಲ್ಯಾಂಡರ್ ಕ್ಲಿಕ್ಕಿಸಿದ ಈ ಫೋಟೋಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.

ಫೋಟೋದಲ್ಲಿ ಭೂಮಿಗೆ ಕಾಣಿಸದ ಚಂದ್ರನ ಮತ್ತೊಂದು ಮುಖ ಕಾಣಿಸಿದೆ. ಚಂದ್ರನ ಮಗ್ಗಲಿನಲ್ಲಿ ಸಾಕಷ್ಟು ಕುಳಿಗಳು ಇರುವುದು ಫೋಟೋದಲ್ಲಿ ಕಂಡು ಬಂದಿದೆ.

"ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್‌ ಅವಾಯಿಡೆನ್ಸ್ ಕ್ಯಾಮೆರಾ (ಎಲ್‌ಎಚ್‌ಡಿಎಸಿ) ಮೂಲಕ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ.

ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್‌ ಅವಾಯಿಡೆನ್ಸ್ ಕ್ಯಾಮೆರಾ (ಎಲ್‌ಎಚ್‌ಡಿಎಸಿ) ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ನೆರವಾಗಲಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸ್ಥಳದಲ್ಲಿ ಇಳಿಯಲು ಇದು ನೆರವಾಗಲಿದೆ. ಇದನ್ನು ಎಸ್‌ಎಸಿ/ಇಸ್ರೊ ಅಭಿವೃದ್ಧಿಪಡಿಸಿದೆ" ಎಂದು ಸಾಮಾಜಿಕ ಮಾಧ್ಯಮ ಟ್ವಿಟರ್ ನಲ್ಲಿ ಇಸ್ರೋ ಹೇಳಿಕೊಂಡಿದೆ.

ಈ ಚಿತ್ರಗಳನ್ನು ಶನಿವಾರ ಸೆರೆಹಿಡಿಲಾಗಿದ್ದು, ಇದರಲ್ಲಿ ಹೈನ್‌, ಬಾಸ್‌ ಎಲ್‌, ಮಾರ್‌ ಹಬ್ಲೊಲ್ಡಿಟಿನಿಯಮ್‌ ಮತ್ತು ಬೆಲ್‌ಕೊವಿಚ್‌ ಎಂಬ ಕುಳಿಗಳನ್ನು ಗುರುತಿಸಲಾಗಿದೆ. ಭೂಮಿಗೆ ಕಾಣಿಸದ ಚಂದ್ರನ ಭಾಗವು ಗೋಳಾರ್ಧವಾಗಿದೆ. ಚಂದ್ರನ ಕಕ್ಷೆಯಲ್ಲಿ ಸಿಂಕ್ರೊನಸ್‌ ಆಗಿ ತಿರುಗುವಿಕೆಯಿಂದಾಗಿ ಈ ಭಾಗ ಭೂಮಿಗೆ ಕಾಣಿಸುವುದೇ ಇಲ್ಲ. ಇದೀಗ ಇಸ್ರೋದ ಕ್ಯಾಮೆರಾವು ಆ ಭಾಗದ ಚಿತ್ರಗಳನ್ನು ತೆಗೆದಿದೆ.

ಇದೇ ಬುಧವಾರ ಚಂದ್ರಯಾನ 3 ಲ್ಯಾಂಡರ್‌ ಚಂದ್ರನ ದಕ್ಷಿನ ಧ್ರುವದ ಭಾಗದಲ್ಲಿ ಇಳಿಯಲಿದೆ. ಇದು ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್‌ ಇಳಿಸಿದ ಜಗತ್ತಿನ ನಾಲ್ಕನೇ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಈ ಕೀರ್ತಿಗೆ ಪಾತ್ರವಾಗಿವೆ.

ಬುಧವಾರ ಸಂಜೆ 6 ಗಂಟೆ 4 ನಿಮಿಷಕ್ಕೆ ಇಸ್ರೋ ಚಂದ್ರಯಾನ-3 ನೌಕೆಯ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದೆ. ಭಾರತದ ಈ ಸಾಧನೆಯತ್ತ ಇಡೀ ವಿಶ್ವವೇ ಕಾತುರದಿಂದ ಎದಿರು ನೋಡುತ್ತಿದ್ದು, ಭಾರತೀಯರು ಈ ಸಾಧನೆ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಈ ಹಿಂದಿನ ಚಂದ್ರಯಾನ ಯೋಜನೆಯಲ್ಲಿ ಕೊನೆಕ್ಷಣದಲ್ಲಿ ಲ್ಯಾಂಡರ್‌ ಇಳಿಯುವ ಸಮಯದಲ್ಲಿ ವಿಫಲವಾಗಿತ್ತು. ಈ ಬಾರಿ ಭಾರತದ ಚಂದ್ರಯಾನ 3 ಯಶಸ್ವಿಯಾಗಲೆಂದು ಜನರು ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com