ಮಾರ್ಚ್‌ನಲ್ಲಿ 4.7 ಮಿಲಿಯನ್ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆ್ಯಪ್
ಇನ್‌ಸ್ಟಂಟ್ ಮೆಸೇಜಿಂಗ್ ಸಂಸ್ಥೆ ವಾಟ್ಸ್ ಆ್ಯಪ್ ಮಾರ್ಚ್ ನಲ್ಲಿ ಭಾರತದಲ್ಲಿ 4.7 ಮಿಲಿಯನ್‌ಗೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಇದು ಹಿಂದಿನ ತಿಂಗಳಲ್ಲಿ ಅದು ನಿರ್ಬಂಧಿಸಿದ ಖಾತೆಗಳ ಸಂಖ್ಯೆಗಿಂತ ಹೆಚ್ಚಾಗಿದೆ.
Published: 01st May 2023 08:00 PM | Last Updated: 01st May 2023 08:00 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಇನ್‌ಸ್ಟಂಟ್ ಮೆಸೇಜಿಂಗ್ ಸಂಸ್ಥೆ ವಾಟ್ಸ್ ಆ್ಯಪ್ ಮಾರ್ಚ್ ನಲ್ಲಿ ಭಾರತದಲ್ಲಿ 4.7 ಮಿಲಿಯನ್‌ಗೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಇದು ಹಿಂದಿನ ತಿಂಗಳಲ್ಲಿ ಅದು ನಿರ್ಬಂಧಿಸಿದ ಖಾತೆಗಳ ಸಂಖ್ಯೆಗಿಂತ ಹೆಚ್ಚಾಗಿದೆ.
ಮೆಟಾ ಮಾಲೀಕತ್ವದ ವಾಟ್ಸ್ ಆ್ಯಪ್ ಭಾರತದ ಮಾಸಿಕ ಬಳಕೆದಾರ-ಸುರಕ್ಷತಾ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಫೆಬ್ರವರಿಯಲ್ಲಿ 4.5 ಮಿಲಿಯನ್ ಖಾತೆಗಳನ್ನು, ಜನವರಿಯಲ್ಲಿ 2.9 ಮಿಲಿಯನ್ ಖಾತೆಗಳನ್ನು, ಡಿಸೆಂಬರ್‌ನಲ್ಲಿ 3.6 ಮಿಲಿಯನ್ ಖಾತೆಗಳನ್ನು ಮತ್ತು ನವೆಂಬರ್‌ನಲ್ಲಿ 3.7 ಮಿಲಿಯನ್ ದುರುದ್ದೇಶಪೂರಿತ ಖಾತೆಗಳನ್ನು ನಿಷೇಧಿಸಿದಿರುವುದಾಗಿ ತಿಳಿಸಿದೆ.
ಇದನ್ನು ಓದಿ: ಭಾರತದಲ್ಲಿ 26 ಲಕ್ಷ 85 ಸಾವಿರ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆ್ಯಪ್
"ಮಾರ್ಚ್ 1, 2023 ಮತ್ತು ಮಾರ್ಚ್ 31, 2023 ರ ನಡುವೆ, 4,715,906 ವಾಟ್ಸ್ ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಖಾತೆಗಳಲ್ಲಿ 1,659,385 ಬಳಕೆದಾರರನ್ನು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು" ಎಂದು ವರದಿ ಹೇಳಿದೆ.
ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳು, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು(50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ) ಪ್ರತಿ ತಿಂಗಳು ಸ್ವೀಕರಿಸಿದ ದೂರುಗಳ ವಿವರಗಳು ಮತ್ತು ತೆಗೆದುಕೊಂಡ ಕ್ರಮಗಳ ಕುರಿತ ವರದಿ ಪ್ರಕಟಿಸಲು ಕಡ್ಡಾಯಗೊಳಿಸಲಾಗಿದೆ.
ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳುತ್ತಿವೆ.